ADVERTISEMENT

ಮೆಗ್ಗಾನ್ ಸೇವೆಗೆ 100 ಖಾಸಗಿ ವೈದ್ಯರ ಪಟ್ಟಿ ಸಿದ್ಧ

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾಹಿತಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 14:51 IST
Last Updated 17 ಸೆಪ್ಟೆಂಬರ್ 2020, 14:51 IST
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಮೂಲ ಸೌಕರ್ಯಗಳನ್ನು ಗುರುವಾರ ಸಚಿವ ಕೆ.ಎಸ್.ಈಶ್ವರಪ್ಪ ಪರಿಶೀಲಿಸಿದರು.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಮೂಲ ಸೌಕರ್ಯಗಳನ್ನು ಗುರುವಾರ ಸಚಿವ ಕೆ.ಎಸ್.ಈಶ್ವರಪ್ಪ ಪರಿಶೀಲಿಸಿದರು.   

ಶಿವಮೊಗ್ಗ:ಮೆಗ್ಗಾನ್ ಆಸ್ಪತ್ರೆಯಲ್ಲಿಕೋವಿಡ್‌ ರೋಗಿಗಳಿಗೆಚಿಕಿತ್ಸೆ ನೀಡಲು 100 ಖಾಸಗಿ ವೈದ್ಯರ ಪಟ್ಟಿ ಸಿದ್ಧವಾಗಿದ್ದು, ಅಗತ್ಯ ಬಿದ್ದರೆ ಅವರ ಸೇವೆ ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪಹೇಳಿದರು.

ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಗುರುವಾರಮೂಲ ಸೌಲಭ್ಯಗಳನ್ನು ಪರಿಶೀಲಿಸಿದ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರತಿದಿನಕೋವಿಡ್‌ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.ಮೆಗ್ಗಾನ್ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಾಗುತ್ತಿದೆ.ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ390ಆಮ್ಲಜನಕ ಸೌಲಭ್ಯ ಇರುವ ಹಾಸಿಗೆಗಳುಲಭ್ಯವಿವೆ. ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ರೋಗಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾದರೆಖಾಸಗಿ ವೈದ್ಯರ ಸೇವೆ ಬಳಸಿಕೊಳ್ಳಲಾಗುವುದು. ಖಾಸಗಿ ನರ್ಸಿಂಗ್ ಹೋಂಗಳಸೇವೆಯನ್ನೂ ಪಡೆಯಲಾಗುವುದು ಎಂದರು.

ADVERTISEMENT

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮಾತನಾಡಿ, ಪ್ರಸ್ತುತ ನಾಲ್ಕು ಖಾಸಗಿ ವೈದ್ಯರ ಸೇವೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಆದರೆ, ಕೆಲವು ವೈದ್ಯರು ಸೇವೆ ನೀಡಲು ಹಿಂದೇಟು ಹಾಕುತ್ತಿದ್ದಾರೆ.ಅಂತಹ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದುಎಚ್ಚರಿಸಿದರು.

ಐಎಂಎ ಅಧ್ಯಕ್ಷ ಡಾ.ಪರಶುರಾಮ ಮಾತನಾಡಿ, ಖಾಸಗಿ ವೈದ್ಯರು ಮೆಗ್ಗಾನ್‍ನಲ್ಲಿ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಅವರಿಗೆ ಕೆಲವು ಸೌಲಭ್ಯಗಳನ್ನು ಒದಗಿಸಿ ಕೊಡಬೇಕು. ಕೋವಿಡ್ರೋಗಿಗಳಚಿಕಿತ್ಸೆಕುರಿತು ತರಬೇತಿ ನೀಡಬೇಕು. ಅವರಿಗೆ ಒಂದು ವಾರ ಸೇವೆ ಸಲ್ಲಿಸಿದ ಬಳಿಕ ಕ್ವಾರೆಂಟೈನ್ ವ್ಯವಸ್ಥೆ ಮಾಡಬೇಕು. ಸರ್ಕಾರಿ ವೈದ್ಯರಿಗೆ ಅನ್ವಯವಾಗುವ ವಿಮಾ ಸೌಲಭ್ಯವನ್ನೂಕಲ್ಪಿಸಬೇಕು. ಸೂಕ್ತ ಗೌರವಧನ, ಕೊರೊನಾಪಾಸಿಟಿವ್ಬಂದರೆಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯಗಳಿವೆ.ರೋಗಿಗಳಿಗೆ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದುಒಂದು ವಾರ ಮೆಗ್ಗಾನ್‌ನಲ್ಲಿ ಸೇವೆ ಸಲ್ಲಿಸಿರುವ ಡಾ.ಶ್ರೀಕಾಂತ್ ಹೆಗಡೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಡಾ.ಧನಂಜಯ ಸರ್ಜಿಮಾಹಿತಿ ನೀಡಿದರು.

ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆ: ಶಿಕಾರಿಪುರ, ಸಾಗರ ಹಾಗೂ ಭಧ್ರಾವತಿ ತಾಲ್ಲೂಕುಆಸ್ಪತ್ರೆಗಳಲ್ಲಿ ತಲಾ 50ಆಮ್ಲಜನಕ ಸೌಲಭ್ಯಗಳಿರುವ ಹಾಸಿಗೆಗಳುಲಭ್ಯವಿದೆ. ಆಯಾ ತಾಲ್ಲೂಕುಗಳಕೋವಿಡ್‌ ರೋಗಿಗಳಿಗೆ ಅಲ್ಲಿಯೇ ಚಿಕಿತ್ಸೆ ಒದಗಿಸಬೇಕು. ಅಗತ್ಯ ಬಿದ್ದರೆ ಮಾತ್ರ ಮೆಗ್ಗಾನ್ ಆಸ್ಪತ್ರೆಗೆ ಅಲ್ಲಿನ ವೈದ್ಯರು ಶಿಫಾರಸು ಮಾಡಬಹುದುಎಂದು ಜಿಲ್ಲಾಧಿಕಾರಿ ಹೇಳಿದರು.

ಮೆಗ್ಗಾನ್ ನಿರ್ದೇಶಕ ಡಾ.ಸಿದ್ದಪ್ಪ, ವೈದ್ಯಕೀಯಅಧೀಕ್ಷಕಡಾ.ಶ್ರೀಧರ್, ಆಡಳಿತ ಮಂಡಳಿ ಸದಸ್ಯರಾದ ಡಾ.ಗೌತಮ್, ದಿನಕರ ಶೆಟ್ಟಿ, ಡಾ.ವಾಣಿ ಕೋರಿ, ಐಎಂಎ ಕಾರ್ಯದರ್ಶಿ ಡಾ.ಶಂಭುಲಿಂಗ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.