ADVERTISEMENT

ಮುಳುಗಡೆ ಸಂತ್ರಸ್ತರ ಪುನರ್ವಸತಿ: ಜಂಟಿ ಸರ್ವೆ ನಂತರ ಕ್ರಮ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಭರವಸೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 15:04 IST
Last Updated 18 ಡಿಸೆಂಬರ್ 2019, 15:04 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಬುಧವಾರ ನಡೆದ  ಉನ್ನತ ಮಟ್ಟದ ಸಭೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಬುಧವಾರ ನಡೆದ  ಉನ್ನತ ಮಟ್ಟದ ಸಭೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.   

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸರ್ಕಾರ ಬದ್ಧವಾಗಿದೆ. ಸಂತ್ರಸ್ತರ ಸಮಗ್ರ ಮಾಹಿತಿ,ಡಿ ನೋಟಿಫೈ ಆದ ಪ್ರದೇಶಗಳ ವಿವರ, ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಂಟಿ ಸರ್ವೆ ವರದಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಕುರಿತು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

ಚಕ್ರಾ, ಸಾವೆಹಕ್ಲು ಯೋಜನೆಗೆಭೂಮಿ ಕಳೆದುಕೊಂಡಿರುವವರಿಗೆ ಸಮಗ್ರ ಪರಿಹಾರ ಒದಗಿಸಲು ಬೆಂಗಳೂರಿನಲ್ಲಿ ಮುಖ್ಯಮಂತ್ರಿಜತೆ ಸಭೆ ನಡೆಸಲಾಗುವುದು. ಅಲ್ಲೇ ಪರಿಹಾರಘೋಷಿಸಲಾಗುವುದು ಎಂದರು.

ADVERTISEMENT

ಹಲವು ದಶಕಗಳಿಂದ ಬಾಕಿ ಉಳಿದಿರುವ ಈ ಸಮಸ್ಯೆ ಬಗೆಹರಿಸಲು ಜಂಟಿ ಸರ್ವೆ ನಡೆಸಬೇಕು.20 ದಿನಗಳ ಒಳಗೆಪ್ರಗತಿಯ ವರದಿ ನೀಡಬೇಕು. ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಪ್ರದೇಶದಲ್ಲಿ 8,285 ಎಕರೆ,ಕಂದಾಯ ಭೂಮಿಯಲ್ಲಿ 1,100 ಎಕರೆ,ಜಿಲ್ಲೆಯ ಗಡಿ ಭಾಗದಲ್ಲಿ387 ಎಕರೆಸೇರಿ 9,773 ಎಕರೆಜಮೀನು ಮೀಸಲಿರಿಸಲಾಗಿದೆ.ಈಗಾಗಲೇ6,303 ಎಕರೆಡಿನೋಟಿಫೈ ಮಾಡಲಾಗಿದೆ. 1982 ಎಕರೆ ಡಿನೋಟಿಫೈಗೆ ಬಾಕಿ ಇದೆ. ಜಂಟಿ ಸಮೀಕ್ಷೆ ನಂತರ 3,565 ಎಕರೆ ತಾಳೆಯಾಗಿದೆ. 2,737 ಎಕರೆ ತಾಳೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾಹಿತಿ ನೀಡಿದರು.

ಇದು ಕ್ಲಿಷ್ಟಕರ ಪ್ರಕ್ರಿಯೆ. ಜಂಟಿ ಸರ್ವೆ ಮಾಡಿದ ನಂತರ ಪ್ರಕರಣವಾರು ಸಮಸ್ಯೆ ಬಗೆಹರಿಸಲಾಗುತ್ತಿದೆ. ಈ ಕಾರ್ಯಕ್ಕಾಗಿ ವಿಶೇಷ ಅಧಿಕಾರಿ ನೇಮಕ ಮಾಡಿದರೆ ಪ್ರಕ್ರಿಯೆ ತ್ವರಿತಗೊಳಿಸಬಹುದಾಗಿದೆ ಎಂದುಮನವಿ ಮಾಡಿದರು.

ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ತೀರ್ಥಹಳ್ಳಿ ತಾಲ್ಲೂಕಿನಲ್ಲಿಹಲವು ಕಂದಾಯ ಜಮೀನುಗಳುಪರಿಭಾವಿತಅರಣ್ಯ ಎಂದು ಆರ್‌ಟಿಸಿಯಲ್ಲಿ ನಮೂದಾಗಿದೆ.ಹಾಗಾಗಿ, ಅಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ತಕ್ಷಣ ಅದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ನಗರ ಪಾಲಿಕೆ ಉಪ ಮೇಯರ್ ಎಸ್‌.ಎನ್‌.ಚನ್ನಬಸಪ್ಪ,ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಶ್ರೀನಿವಾಸುಲು,ಹೆಚ್ಚುವರಿಜಿಲ್ಲಾಧಿಕಾರಿ ಜೆ.ಅನುರಾಧ ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.