ADVERTISEMENT

ಕೋವಿಡ್‌ನಿಂದ ಸಚಿವ ಕೆ.ಎಸ್. ಈಶ್ವರಪ್ಪ ಗುಣಮುಖ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 14:17 IST
Last Updated 9 ಸೆಪ್ಟೆಂಬರ್ 2020, 14:17 IST
ಸಚಿವ ಕೆ.ಎಸ್. ಈಶ್ವರಪ್ಪ
ಸಚಿವ ಕೆ.ಎಸ್. ಈಶ್ವರಪ್ಪ   

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಕೊರೊನಾ ವೈರಸ್‌ ಇರುವುದು ಪತ್ತೆಯಾದ ನಂತರ ಪತ್ನಿ ಜಯಲಕ್ಷ್ಮಿ ಅವರ ಜತೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು. ಹಾಗಾಗಿ, ಬುಧವಾರ ಮತ್ತೊಮ್ಮೆ ತಪಾಸಣೆ ನಡೆಸಿದ ನಂತರ ಬೆಳಿಗ್ಗೆ 11ಕ್ಕೆ ಮನೆಗೆ ಕಳುಹಿಸಲಾಯಿತು.

ಒಂದು ವಾರ ಬೆಂಗಳೂರಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿರುವ ಅವರು ಸೆ.15ರಂದು ಜಿಲ್ಲೆಗೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.