ADVERTISEMENT

ಹರ್ಷನ ಹತ್ಯೆ ಮಾಡಿದ್ದು ಮುಸ್ಲಿಂ ಗೂಂಡಾಗಳು: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 7:47 IST
Last Updated 21 ಫೆಬ್ರುವರಿ 2022, 7:47 IST
ಸಚಿವ ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ    

ಶಿವಮೊಗ್ಗ: ಇಷ್ಟು ದಿನ ಸುಮ್ಮನಿದ್ದ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಲು ಆರಂಭಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷನನ್ನು ಹತ್ಯೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ಸೋಮವಾರ ಶಿವಮೊಗ್ಗಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಆರೋಪಿಗಳನ್ನು ಪತ್ತೆ ಹಚ್ಚಿ ತ್ವರಿತವಾಗಿ ಬಂಧಿಸಲು ಪೊಲೀಸರಿಗೆ ಸೂಚಿಸಿರುವೆ. ಉತ್ತಮ ಸಂಸ್ಕಾರ, ನಡವಳಿಕೆ ಹೊಂದಿದ್ದ. ಮದುವೆಯೂ ಆಗದಿದ್ದ ಹರ್ಷನ ಹತ್ಯೆ ಸಹಿಸಲು ಸಾಧ್ಯವಿಲ್ಲ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.