ADVERTISEMENT

ಶಿವಮೊಗ್ಗ: 400 ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ

ಇಂದಿನಿಂದ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎರಡು ತಿಂಗಳ ಪಡಿತರ ವಿತರಣೆ ಆರಂಭ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 14:13 IST
Last Updated 1 ಏಪ್ರಿಲ್ 2020, 14:13 IST
ಶಿವಮೊಗ್ಗದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ಶಿವಮೊಗ್ಗದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.   

ಶಿವಮೊಗ್ಗ:ನಗರ ಪಾಲಿಕೆಯ 400 ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಊಟ ನೀಡಬೇಕು.ಅವರ ಕುಟುಂಬದ ಸದಸ್ಯರಿಗೆ ದಿನಸಿ ಹಾಗೂ ಅಗತ್ಯ ವಸ್ತುಗಳ ಕಿಟ್‌ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕೊರೊನಾ ನಿಯಂತ್ರಣ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ, ಪೊಲೀಸ್ ಸೇರಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಶ್ಲಾಘನೀಯ.ಏ.14ರವರೆಗೂಕಟ್ಟುನಿಟ್ಟಾಗಿ ಮುಂದುವರಿಸಬೇಕು.ಜನರಿಗೆದಿನಸಿ, ಹಣ್ಣು-ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ADVERTISEMENT

ಇಂದಿನಿಂದ ಪಡಿತರ ವಿತರಣೆ:

ನಗರ ಮತ್ತು ಗ್ರಾಮೀಣ ಭಾಗದ ಪಡಿತರ ಚೀಟಿದಾರರಿಗೆ ಮಾರ್ಚ್‌ 2ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಎರಡುತಿಂಗಳಿನ ಪಡಿತರ ವಿತರಿಸಲಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಹಕ್ಕಿಜ್ವರ ಕಾಣಿಸಕೊಂಡ ಕಾರಣಜಿಲ್ಲೆಯಲ್ಲೂ ಕೋಳಿ, ಕೋಳಿ ಮೊಟ್ಟೆ ಮಾರಾಟ ನಿಷೇಧಿಸಲಾಗಿದೆ. ತಜ್ಞರ ತಂಡದ ವರದಿಬಂದ ನಂತರಮಾರಾಟಕ್ಕೆ ಅನುಮತಿ ನೀಡುವಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಗ್ರಾಮೀಣ ಪ್ರದೇಶದ ಜನರಿಗೆ ಸೋಂಕುಹರಡದಂತೆಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಕರಪತ್ರ ವಿತರಿಸಲಾಗಿದೆ. ಸ್ಯಾನಿಟೈಜರ್, ಮಾಸ್ಕ್ ಸರಬರಾಜು ಮಾಡಲಾಗಿದೆ. ಔಷಧ ಸಿಂಪಡಣೆಗೆ ಸೂಚಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಕ್ವಾರಂಟೈನ್ ವ್ಯವಸ್ಥೆಗಾಗಿ ಸುವ್ಯವಸ್ಥಿತಎರಡು ಹಾಸ್ಟೆಲ್‌ ಕಾಯ್ದಿರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ದಿನದ 24ತಾಸೂ ಔಷಧ ಮಳಿಗೆ ತೆರೆದು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಸೂಚಿಸಲಾಗಿದೆ. ದೇಶ-ವಿದೇಶಗಳಿಂದ ಬಂದಿರುವ ಹಾಗೂ ಇತ್ತೀಚೆಗೆ ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಂದ ಆಗಮಿಸಿದ ಜನರ ಮೇಲೂ ನಿಗಾ ಇಡಲಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ರೈತರು ಹೊಲ-ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ನಿರ್ಬಂಧ ಇಲ್ಲ. ಸುರಕ್ಷತಾ ಕ್ರಮಗಳನ್ನು ಅನುಸರಿಸಲೇಬೇಕು ಬೆಳೆ ಕಟಾವು ಕಾರ್ಯ ಕೈಗೊಳ್ಳಲು, ಕೊಳವೆಬಾವಿಗಳನ್ನು ಕೊರೆಸಿಕೊಳ್ಳಲು ಅನುಮತಿ ನೀಡಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಯುವಕರು ಜೂಜುಮತ್ತಿತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ, ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ.ಶಾಂತರಾಜು, ಜಿಲ್ಲಾ ಪಂಚಾಯಿತಿಸಿಇಒಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.