ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಮೇ 28ರಂದು ಬುಧವಾರ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಧು ಬಂಗಾರಪ್ಪ ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗದ ಗೋಪಾಳದ ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಸ್ಮಾರಕ ಗ್ರಂಥಾಲಯ ಉದ್ಘಾಟನೆ ಮಾಡಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. 10.30ಕ್ಕೆ ಶಿವಮೊಗ್ಗ ಎಪಿಎಂಸಿಯ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟಿಸುವರು. ಮಧ್ಯಾಹ್ನ 12 ಗಂಟೆಗೆ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕೂಡ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಂಡಗದ್ದೆಯ ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ದಿನೇಶ್ ಗುಂಡೂರಾವ್ ಮಧ್ಯಾಹ್ನ 2.30ಕ್ಕೆ ಸರ್ಕಾರಿ ಆಯುರ್ವೇದ ವೈದ್ಯಕೀಯ ಬೋಧನಾ ಆಸ್ಪತ್ರೆಗೆ ಭೇಟಿ ನೀಡುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.