ಶಿವಮೊಗ್ಗ: ‘ರಾಜ್ಯದಲ್ಲಿ ಬರಗಾಲ ಪೀಡಿತ ಪ್ರದೇಶಗಳನ್ನು ಗುರುತಿಸಿ ಮೂಲ ನೀರಾವರಿ ವ್ಯವಸ್ಥೆ ಕಲ್ಪಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಆದ್ಯತೆ ನೀಡಲಾಗುತ್ತಿದೆ. ₹ 52,000 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದು ಸಣ್ಣ ನೀರಾವರಿ ಸಚಿವ ಎಂ.ಎಸ್.ಬೋಸರಾಜ ಹೇಳಿದರು.
ಸೊರಬ ತಾಲ್ಲೂಕಿನ ಬಂಗಾರ ಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸಮಾಧಿಗೆ ಭೇಟಿ ನೀಡಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ₹ 1,800 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದ ಅವರು, ‘ಹವಾಮಾನ ವೈಪರೀತ್ಯಗಳಿಂದ ಅಂತರ್ಜಲ ಕಡಿಮೆಯಾಗಿದೆ. ನದಿ, ಹಳ್ಳಕೊಳ್ಳಗಳಿಗೆ ಅಡ್ಡಲಾಗಿ ಚೆಕ್ ಡ್ಯಾಂಗಳನ್ನು ನಿರ್ಮಿಸುವುದರಿಂದ ಅಂತರ್ಜಲ ವೃದ್ಧಿಯಾಗಿ ರೈತರು ಸಕಾಲಕ್ಕೆ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಬ್ಯಾರೇಜ್ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.