ADVERTISEMENT

ಶಾಸಕ ಹರತಾಳು ಹಾಲಪ್ಪರಿಂದ ನೀತಿ ಸಂಹಿತೆ ಉಲ್ಲಂಘನೆ: ಬಿ.ಆರ್. ಜಯಂತ್ ಆರೋಪ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 6:00 IST
Last Updated 16 ನವೆಂಬರ್ 2021, 6:00 IST
ಜಯಂತ್
ಜಯಂತ್   

ಸಾಗರ: ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಭೆಗಳನ್ನು ನಡೆಸುವ ಮೂಲಕ ಶಾಸಕ ಹರತಾಳು ಹಾಲಪ್ಪ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್ ದೂರಿದ್ದಾರೆ.

ಕಳೆದ ನ. 11ರಂದು ಶಾಸಕ ಹಾಲಪ್ಪ ಅವರು ನಗರಸಭೆ ಅಧ್ಯಕ್ಷರ ಕೊಠಡಿಯಲ್ಲಿ ತಹಶೀಲ್ದಾರ್‌, ನಗರಸಭೆ ಆಯುಕ್ತರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈಚೆಗೆ ಪಡವಗೋಡು ಗ್ರಾಮ ಪಂಚಾಯಿತಿಯಲ್ಲಿ ಶಾಸಕ ಹಾಲಪ್ಪ ಅವರು ಸಭೆ ನಡೆಸಿರುವುದು ಕೂಡ ನಿಯಮದ ಉಲ್ಲಂಘನೆಯಾಗಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.