
ಸೊರಬ: ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದಾಗ ಮಾತ್ರ ಸದೃಢ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಹ್ಯಾದ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಎಚ್.ಎಸ್. ಮೋಹನ್ ಚಂದ್ರಗುತ್ತಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 2025–26ನೇ ಸಾಲಿನ ಕ್ರೀಡಾ, ಸಾಂಸ್ಕೃತಿಕ ರಾಷ್ಟ್ರೀಯ ಸೇವಾ ಯೋಜನೆ, ಭಾರತ್ ಸೇವಾದಳ ಸುರಭಿ ರೋವರ್ಸ್, ರೇಂಜರ್ಸ್ ರೆಡ್ ಕ್ರಾಸ್, ಬಿಐಎಸ್ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಯಶಸ್ಸು ಸುಮ್ಮನೆ ಬರುವುದಿಲ್ಲ. ನಿರಂತವಾದ ಶ್ರಮ ಸ್ವಾಭಿಮಾನವಿದ್ದರೆ ಬದುಕಿನಲ್ಲಿ ಯಶಸ್ಸು ಸಾಧ್ಯ. ಎಂದು ತಿಳಿಸಿದರು. ಪೋಷಕರ ಕಷ್ಟ ಕಾರ್ಪಣ್ಯಗಳನ್ನು ನೆನಪಿಸಿಕೊಂಡು ಅಧ್ಯಯನ ಮಾಡಿದಾಗ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ನಾಗರಾಜ ಜೈನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಎಂ. ಸುರೇಶಪ್ಪ ವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಅರ್. ಲಿಂಗರಾಜಪ್ಪ ಅವರಿಗೆ ಸನ್ಮಾನ ಮಾಡಲಾಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವಿರೇಶ್ ಶಿಗ್ಗಾ, ವಿಜಯೇಂದ್ರ ಎಡಗೊಪ್ಪ, ಪುಷ್ಪಾ, ಹಿರಿಯ ಉಪನ್ಯಾಸಕ ಡಿ.ವಿ.ಚಿದಾನಂದ, ಸಮಾಜಶಾಸ್ತ್ರ ಉಪನ್ಯಾಸಕ ವಿ.ಉಮೇಶ್ ವಾರ್ಷಿಕ ವರದಿ ಮಂಡಿಸಿದರು. ಉಪನ್ಯಾಸಕರಾದ ರವಿ.ವೈ, ಮಂಜುನಾಥ್ ಎನ್.ಎನ್,ಮಲ್ಲೇಶಪ್ಪ, ಮಂಜುನಾಥ್ ಕೆ.ಕೆ, ಭರತ್, ನೀಲಕಂಠಪ್ಪ, ಶರಾವತಿ, ಪ್ರಜ್ವಲ್, ಅನಂತ್ ಕುಮಾರ್, ವಸಂತ ಕುಮಾರ್, ಸಂತೋಷ್, ಸಂಗೀತಾ, ಶಶಿಕಲಾ, ಸುಚಿತ್ರಾ, ನಯನಾ, ಸಂಧ್ಯಾ ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.