ADVERTISEMENT

ಶಿವಮೊಗ್ಗ: ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಪತ್ತೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 18:23 IST
Last Updated 1 ಡಿಸೆಂಬರ್ 2025, 18:23 IST
<div class="paragraphs"><p>ಮಂಗನ ಕಾಯಿಲೆ</p></div>

ಮಂಗನ ಕಾಯಿಲೆ

   

ಸಾಂದರ್ಭಿಕ ಚಿತ್ರ

ಹೊಸನಗರ (ಶಿವಮೊಗ್ಗ): ಮಲೆನಾಡಿನಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌– ಕೆಎಫ್‌ಡಿ) ಮತ್ತೆ ಪತ್ತೆ ಆಗಿದೆ. ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳ್ಳೋಡಿ ಗ್ರಾಮದ 50 ವರ್ಷದ ಮಹಿಳೆಯಲ್ಲಿ ಕೆಎಫ್‌ಡಿ ಲಕ್ಷಣ ಕಂಡು ಬಂದಿದ್ದು, ಸೋಂಕು ದೃಢಪಟ್ಟಿದೆ. ‌

ADVERTISEMENT

‘ಮಹಿಳೆಗೆ ತಲೆ ನೋವು, ಜ್ವರ ಕಾಣಿಸಿಕೊಂಡ ಬಳಿಕ ಸೊನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಸುರೇಶ್ ತಿಳಿಸಿದರು. 

ಭೀತಿ: ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ. 

ಮಹಿಳೆಯು ಕಾಡಿನಲ್ಲಿ ದರಗು (ಒಣ ಎಲೆ) ತರಲು ಹೋದಾಗ ಉಣ್ಣೆಯಿಂದ ಸೋಂಕು ಹರಡಿರಬಹುದು ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.