
ಪ್ರಜಾವಾಣಿ ವಾರ್ತೆ
ಶಿವಮೊಗ್ಗ: ರಸ್ತೆ ದುರಸ್ತಿ ಕಾಮಗಾರಿ ಕಾರಣ ಮಾರ್ಚ್ 5ರಿಂದ 15ರವರೆಗೆ ಪ್ರತಿ ದಿನ ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಆಗುಂಬೆ ಘಾಟ್ ಮೂಲಕ ಸಾಗುವ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಆಗುಂಬೆ ಘಾಟಿಯ ತಪಾಸಣಾ ಕೇಂದ್ರದಿಂದ ಹೆಬ್ರಿವರೆಗೆ ₹ 5.25 ಕೋಟಿ ವೆಚ್ಚದಲ್ಲಿ 20 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಜೆ 7ರಿಂದ ಬೆಳಿಗ್ಗೆ 7ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಉಡುಪಿ. ಮಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟಿ, ಕಾರ್ಕಳ ಮೂಲಕ ಉಡುಪಿ ತಲುಪಬಹುದು, ಭಾರಿ ವಾಹನಗಳು ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಸಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.