ಆನವಟ್ಟಿ: ಸೊರಬ, ಆನವಟ್ಟಿ, ಶಿರಾಳಕೊಪ್ಪಕ್ಕೆ ಶರಾವತಿ ನದಿಯಿಂದ ಕುಡಿಯುವ ನೀರು ಒದಗಿಸುವ ಯೋಜನೆಯು ಕೇಂದ್ರ ಸರ್ಕಾರದ ಶೇ60 ಹಾಗೂ ರಾಜ್ಯ ಸರ್ಕಾರದ ಶೇ 40 ರಷ್ಟು ಅನುದಾನದಲ್ಲಿ ಸಿದ್ಧವಾಗಿದೆ. ಟೆಂಡರ್ ಆಗಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಿ ನೀರು ಪೂರೈಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಬಿಜೆಪಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ವಿಕಸಿತ ಭಾರತದ ಅಮೃತ ಕಾಲ ಸಂಕಲ್ಪ’ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಡಿವಾಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರು ಮಾತನಾಡಿ, ‘ಮೋದಿ ಅವರಿಂದ ಭಾರತ ವಿಕಸಿತ ಆದಂತೆ, ಸಂಸದ ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ಶಿವಮೊಗ್ಗ ಜಿಲ್ಲೆ ವಿಕಸಿತವಾಗಿದೆ’ ಎಂದರು.
‘ಬಿಜೆಪಿ ಆಡಳಿತದಲ್ಲಿ ನಿರ್ಮಾಣ ಮಾಡಿರುವ ಕೆಎಸ್‌ಆರ್‌ಟಿ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಸೊರಬ ತಾಲ್ಲೂಕಿನಿಂದ ಆಯ್ಕೆಯಾಗಿರುವ ಸಚಿವರಿಗೆ ಸಾಧ್ಯವಾಗಿಲ್ಲ. ಗ್ಯಾರಂಟಿಗಳ ಜಪದಲ್ಲಿ ತಾಲ್ಲೂಕಿನ ಹದಗೆಟ್ಟ ರಸ್ತೆಗಳ ಗುಂಡಿ ಮುಚ್ಚಲು ಅವರಿಗೆ ಸಾಧ್ಯವಾಗಿಲ್ಲ’ ಎಂದು ಹೇಳಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಮುಖಂಡರಾದ ಮೇಘರಾಜ್, ಕೊಟ್ರಯ್ಯ ಸ್ವಾಮಿ, ಪ್ರಕಾಶ ತಲಕಾಲುಕೊಪ್ಪ, ಗೀತಾ ಮಲ್ಲಿಕಾರ್ಜುನ, ಬಿ.ಎಚ್.ಕೃಷ್ಣಮೂರ್ತಿ, ಹೊನ್ನಪ್ಪ ಎಣ್ಣೆಕೊಪ್ಪ, ಬಸವನ ಗೌಡ ಮಲ್ಲಾಪುರ, ಕೆರಿಯಪ್ಪ, ಸುಧಾ ಶಿವಪ್ರಸಾದ್ ಕುಸದ್, ರಾಜು ಬಡಗಿ, ವಿಶ್ವನಾಥ, ವಿನಯ್ ಗುತ್ತೇರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.