ADVERTISEMENT

ಭದ್ರಾವತಿ | ಕ್ರಿಕೆಟ್ ಆಟದಲ್ಲಿ ಜಗಳ: ಯುವಕನ ಕೊಲೆಯಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 6 ಮೇ 2025, 14:36 IST
Last Updated 6 ಮೇ 2025, 14:36 IST
ಕೊಲೆಯಾದ ಅರುಣ್
ಕೊಲೆಯಾದ ಅರುಣ್   

ಭದ್ರಾವತಿ: ಕ್ರಿಕೆಟ್ ಆಟದ ವೇಳೆ ಉಂಟಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೋಮವಾರ ರಾತ್ರಿ ನಗರದ ಹೊಸಮನೆ ಶಿವಾಜಿ ವೃತ್ತದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅರುಣ್ (23) ಕೊಲೆಯಾದ ಯುವಕ. ಸೋಮವಾರ ಬೆಳಿಗ್ಗೆ ಅಕ್ಕಮಹಾದೇವಿ ವಿದ್ಯಾ ಸಂಸ್ಥೆ (ಎ.ವಿ.ಎಸ್.) ಬಳಿ ಇರುವ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಅರುಣ್ ಮತ್ತು ಇತರರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.  

ಜಗಳ ರಾತ್ರಿ ಗಾಂಧಿನಗರ, ಕೇಶವಪುರ ಬಡಾವಣೆ ನೀರಿನ ಟ್ಯಾಂಕ್ ಹತ್ತಿರ ಮದ್ಯ ಸೇವಿಸುವಾಗ ಮುಂದುವರಿದಿದ್ದು, ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಯುವಕನ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಯುವಕ ಸಂಜಯ್ ಎಂಬಾತ ಗಾಯಗೊಂಡಿದ್ದಾನೆ.

ADVERTISEMENT

ನಗರದ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪನಿರೀಕ್ಷಕ ಕೃಷ್ಣಕುಮಾರ್, ನಗರ ಪೊಲೀಸ್ ಠಾಣೆ ಉಪನಿರೀಕ್ಷಕ ಚಂದ್ರಶೇಖರ್ ನಾಯಕ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.