ADVERTISEMENT

ಸಮ ಸಮಾಜದ ಕನಸು ಕಂಡ ನಾರಾಯಣಗುರು: ಹಾಲಪ್ಪ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 2:36 IST
Last Updated 11 ಸೆಪ್ಟೆಂಬರ್ 2022, 2:36 IST
ಸಾಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಶಾಸಕ ಎಚ್.ಹಾಲಪ್ಪ ಹರತಾಳು ಉದ್ಘಾಟಿಸಿದರು.
ಸಾಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಶಾಸಕ ಎಚ್.ಹಾಲಪ್ಪ ಹರತಾಳು ಉದ್ಘಾಟಿಸಿದರು.   

ಸಾಗರ: ನಾರಾಯಣಗುರುಗಳ ಸಮ ಸಮಾಜದ ಕನಸು ಕಾಣುವ ಜೊತೆಗೆ ಅದನ್ನು ಸಾಕಾರಗೊಳಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟ ದಾರ್ಶನಿಕ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದ ಮೂಲಕ ಸಮಾಜದಲ್ಲಿ ಹಿಂದುಳಿದವರು ಮುಖ್ಯವಾಹಿನಿಗೆ ಬರಬೇಕು ಎಂದು ನಾರಾಯಣಗುರುಗಳು ವಿವಿಧ ಕಾರ್ಯಕ್ರಮ ಹಮ್ಮಿಕೊಂಡ ಕಾರಣ ಕೇರಳದಲ್ಲಿ ಸಾಕ್ಷರತೆ ಪ್ರಮಾಣ ಶೇ 100 ತಲುಪಿದೆ ಎಂದರು.

ADVERTISEMENT

ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಎಂ.ಹಾಲಪ್ಪ ಉಪನ್ಯಾಸ ನೀಡಿದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಆರ್ಯ ಈಡಿಗರ ಸಂಘದ ಎಂ.ಸಿ. ಪರಶುರಾಮಪ್ಪ, ಬಿ.ನಾಗರಾಜ್, ಸರ್ವಮಂಗಳಾ ನಾಗರಾಜ್, ದೇವೇಂದ್ರಪ್ಪ ಯಲಕುಂದ್ಲಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಪರಮೇಶ್ವರಪ್ಪ ಇದ್ದರು.

ಸುಭಾಂಶ ಸೂರಗುಪ್ಪೆ ಪ್ರಾರ್ಥಿಸಿದರು. ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಸ್ವಾಗತಿಸಿದರು. ಟಿ.ಪರಮೇಶ್ವರಪ್ಪ ವಂದಿಸಿದರು. ಮೋಹನ್ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.