ಶಿವಮೊಗ್ಗ: ಮೈಸೂರಿನಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಕ್ರೀಡಾಪಟು ಸೈಯದ್ ಫೈಸಲ್ ಸ್ಪೀಡ್ ರಿಲೇಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ಸೈಯದ್ ಫೈಸಲ್ ಶಿವಮೊಗ್ಗದ ಸೈಯದ್ ಜುಲ್ಪಿಕರ್ ಹಾಗೂ ನಾಜೀಮಾ ದಂಪತಿ ಪುತ್ರ. ಲಕ್ಷ್ಯ ಶಾಲೆಯ ವಿದ್ಯಾರ್ಥಿ.
ರಾಷ್ಟ್ರಮಟ್ಟದ ಸ್ಪೀಡ್ ಸ್ಕೇಟಿಂಗ್ ಪಂದ್ಯದಲ್ಲಿ ರಾಜ್ಯದ 20ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಫೈಸಲ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.