
ಶಿಕಾರಿಪುರ ತಾಲ್ಲೂಕು ಈಸೂರಿನ ಪಶು ವೈದ್ಯ ಎಂ.ರವಿ ರಾಷ್ಟ್ರಮಟ್ಟದ ಮಾಸ್ಟರ್ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ
ಶಿಕಾರಿಪುರ: ಪಶು ವೈದ್ಯಕೀಯ ಇಲಾಖೆ ವೈದ್ಯಾಧಿಕಾರಿ ಎಂ.ರವಿ ಈಸೂರು ಅವರು ತೆಲಂಗಾಣದ ಕ್ರೀಡಾ ಪ್ರಾಧಿಕಾರದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ ಈಜು ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದು ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಖಿಲ ಭಾರತ ಮಾಸ್ಟರ್ಸ್ ಫೆಡರೇಷನ್ ಮಂಗಳವಾರ ಆಯೋಜಿಸಿದ್ದ ಸ್ಪರ್ಧೆಯಲ್ಲಿ 51-54 ವರ್ಷದೊಳಗಿನ 50 ಮೀಟರ್ ಬಟರ್‌ಫ್ಲೈ ಹಾಗೂ 100ಮೀ. ಬ್ರೆಸ್ಟ್‌ಸ್ಟ್ರೋಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾರೆ. ಏಪ್ರಿಲ್‌ನಲ್ಲಿ ಮಲೇಷ್ಯಾ ಅಥವಾ ಥಾಯ್ಲೆಂಡ್‌ನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆ ನಡೆಯಲಿದೆ.
ಇವರಿಗೆ ಸಂಗಮೇಶ್ ಪಾರಶೆಟ್ಟಿ, ರಮೇಶ್ ಪಾರಶೆಟ್ಟಿ ಈಜು ತರಬೇತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.