
ಸೊರಬ: ತಾಲ್ಲೂಕಿನ ಚಂದ್ರಗುತ್ತಿ ಸಮೀಪದ ಹೊರಬೈಲು ಗ್ರಾಮದಲ್ಲಿ ನೂತನವಾಗಿ ಆರಂಭವಾದ ಸರ್ಕಾರಿ ಬಸ್ ಸಂಚಾರಕ್ಕೆ ತಾ.ಪಂ. ಮಾಜಿ ಸದಸ್ಯ ಸುನೀಲ್ ಗೌಡ ಚಾಲನೆ ನೀಡಿದರು.
‘ಶಿಕ್ಷಣ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಮಧು ಬಂಗಾರಪ್ಪ ಅವರ ಆದೇಶ ಮತ್ತು ಮುತುವರ್ಜಿಯಿಂದ ಬಸ್ ಸೌಲಭ್ಯ ದೊರೆತಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಕೂಲಿ ಕಾರ್ಮಿಕರಿಗೆ ಅನುಕೂಲವಾಗಿದೆ. ಈ ಭಾಗದಿಂದ ಶಿರಸಿ ಭಾಗಕ್ಕೆ ವಿದ್ಯಾಭ್ಯಾಸಕ್ಕಾಗಿ ನೂರಾರು ವಿದ್ಯಾರ್ಥಿಗಳು ತೆರಳುತ್ತಾರೆ. ಇದಕ್ಕೆ ಸಹಕರಿಸಿದ ಶಿರಸಿ ಶಾಸಕರಾದ ಭೀಮಣ್ಣ ನಾಯ್ಕ್ ಅವರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ’ ಎಂದರು.
ಹೊರಬೈಲು ಗ್ರಾಮದಿಂದ ವಿದ್ಯಾನಗರ, ಹರೀಶಿ, ಶಿರಸಿ ಭಾಗಕ್ಕೆ ಬಸ್ ಸೌಲಭ್ಯಕ್ಕಾಗಿ ಸಾರ್ವಜನಿಕರಿಂದ ಒತ್ತಾಯವಿತ್ತು. ವಿದ್ಯಾರ್ಥಿಗಳು ಮತ್ತು ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ತಾಪಂ ಮಾಜಿ ಸದಸ್ಯ ಸುನೀಲ್ ಗೌಡ ಅವರು ಸಚಿವ ಮಧು ಬಂಗಾರಪ್ಪ ಅವರ ಗಮನಕ್ಕೆ ತಂದು ಬಸ್ ಸೌಲಭ್ಯ ಕಲ್ಪಿಸಿರುವುದು ಸಂತಸ ತಂದಿದೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಬಸ್ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸ್ಥಳೀಯರು ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಜೊತೆಗೆ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ರವಿ ಹೊರಬೈಲು, ಅಶೋಕ್ ಗೌಡ, ಹಾಲಮ್ಮ, ದರ್ಶನ್ ಗೌಡ, ಸುನೀಲ್, ಹರೀಶ್, ಪುಟ್ಟಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.