ಪ್ರಾತಿನಿಧಿಕ ಚಿತ್ರ
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸಲಾಗುತ್ತಿದೆ. ಅದಕ್ಕೆ ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದ್ದು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಚ್ಚುಕಟ್ಟುದಾರರು ಎಡದಂಡೆ ನಾಲೆಯ ನೀರನ್ನು ಅವಲಂಬಿಸಿ ಭತ್ತ ಅಥವಾ ಇನ್ಯಾವುದೇ ಹೆಚ್ಚು ನೀರು ಅವಲಂಬಿತ ಬೆಳೆಗಳನ್ನು ಬೆಳೆಯಬಾರದು. ಒಂದು ವೇಳೆ ಬೆಳೆಗಳನ್ನು ಬೆಳೆದು ನಾಲೆಯಿಂದ ನೀರು ಸಿಗದೇ ಬೆಳೆ ನಷ್ಟವಾದಲ್ಲಿ ನೀರಾವರಿ ಇಲಾಖೆಯು ಯಾವುದೇ ರೀತಿಯಲ್ಲಿಯೂ ಜವಾವಾಬ್ದಾರಿ ಆಗುವುದಿಲ್ಲ. ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ಅಚ್ಚುಕಟ್ಟು ಭಾಗದ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.