ADVERTISEMENT

ರಾಜ್ಯಪಾಲರ ನಡೆ ಹೊಸ ವ್ಯವಸ್ಥೆಗೆ ನಾಂದಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 12:08 IST
Last Updated 20 ಏಪ್ರಿಲ್ 2021, 12:08 IST
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಸ್ತಿತ್ವದಲ್ಲಿ ಇರುವಾಗ ರಾಜ್ಯಪಾಲರು ಕೋವಿಡ್‌ ವಿಚಾರ ಚರ್ಚಿಸಲು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಆದರೆ, ಅವರ ನಡೆ ಹೊಸ ವ್ಯವಸ್ಥೆಗೆ ನಾಂದಿ ಹಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ರಾಜ್ಯಪಾಲರು ಸಭೆ ಕರೆಯಬಾರದು ಎಂಬ ನಿಯಮ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಕಾರಣ ಜನರ ಸುರಕ್ಷತೆ ದರಷ್ಟಿಯಿಂದ ರಾಜ್ಯಪಾಲರು ಸಭೆ ಕರೆದಿರಬಹುದು. ಅವರು ತೆಗೆದುಕೊಳ್ಳುವ ನಿರ್ಧಾರ ರಾಜ್ಯಕ್ಕೆ ಒಳಿತು ಮಾಡುತ್ತದೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಸ್ತೆಯಲ್ಲಿ ಹೋಗುವ ಕುಡುಕರ ರೀತಿ ಮಾತನಾಡುತ್ತಿದ್ದಾರೆ. ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ ಎಂಬ ಜ್ಞಾನವೂ ಅವರಿಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಬಂದರೂ ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸುವ ಬದಲು ಟೀಕಿಸುತ್ತಿದ್ದಾರೆ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.