ಶಿಕಾರಿಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಎದುರು ಮಂಗಳವಾರ ರೋಗಿ ಕಡೆಯವರು ಪ್ರತಿಭಟನೆ ನಡೆಸಿದರು
ಶಿಕಾರಿಪುರ: ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡದೆ ವೈದ್ಯರು ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಹುಟ್ಟಿದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಎದುರು ರೋಗಿ ಕಡೆಯವರು ಮಂಗಳವಾರ ಪ್ರತಿಭಟನೆ ನಡೆಸಿದರು.
‘ಹೆರಿಗೆ ಮಾಡಿಸುವುದಕ್ಕೆ ಎರಡು ದಿನ ತಡ ಮಾಡಿದ್ದಾರೆ. ಹೆರಿಗೆ ಸಂದರ್ಭದಲ್ಲೂ ಚಿಕಿತ್ಸೆ ನೀಡುವಲ್ಲಿ ತಡ ಮಾಡಿದ್ದರಿಂದ ಹುಟ್ಟಿದ ಮಗು ಸಾವನ್ನಪ್ಪಿದೆ. ಅದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಕೂಡಲೇ ವೈದ್ಯ ಗೋವರ್ಧನ್ ಅವರನ್ನು ಅಮಾನತು ಮಾಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಕೆಂಚಿಗೊಂಡನಕೊಪ್ಪ ಗ್ರಾಮಸ್ಥರು, ಹೆರಿಗೆಯಾದ ಸೌಮ್ಯಾ ಸತೀಶ್‌ನಾಯ್ಕ ಕುಟುಂಬದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಆಸ್ಪತ್ರೆ ಆಡಳಿತಾಧಿಕಾರಿ ಶಿವಾನಂದ ಹಾಗೂ ಪೊಲೀಸರು ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.
ಪಟ್ಟಣ ಠಾಣೆ ಇನ್‌ಸ್ಪೆಕ್ಟರ್ ಶರತ್, ಮುಖಂಡ ರಾಘವೇಂದ್ರನಾಯ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಮಂಜುನಾಯ್ಕ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.