ADVERTISEMENT

ಸೊರಬ: ವಿದ್ಯುತ್‌ ಸ್ಪರ್ಶಿಸಿ ನವವಿವಾಹಿತ ಸಾವು

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:48 IST
Last Updated 31 ಮೇ 2025, 14:48 IST
ದೇವರಾಜ್
ದೇವರಾಜ್   

ಸೊರಬ: ತಾಲ್ಲೂಕಿನ ಹೊಳೆಜೋಳದಗುಡ್ಡೆ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶಿಸಿ ನವವಿವಾಹಿತ ಮೃತಪಟ್ಟಿದ್ದಾರೆ.

ಗ್ರಾಮದ ದೇವರಾಜ ಮೃತ ವ್ಯಕ್ತಿ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶಸಿ ಅಸ್ವಸ್ಥರಾಗಿದ್ದರು. ಸ್ಥಳೀಯರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ದೇವರಾಜ್ ಮೃತಪಟ್ಟಿದ್ದಾರೆ‌‌.

ದೇವರಾಜ ವಿವಾಹವಾಗಿ ಕೇವಲ 10 ದಿನಗಳಾಗಿದ್ದವು ಎಂದು ತಿಳಿದುಬಂದಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.