ADVERTISEMENT

ಮೊಬೈಲ್‌, ಜಂಕ್‌ಫುಡ್‌ ಮಕ್ಕಳ ಶತ್ರು

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ. ರೇಖಾ

​ಪ್ರಜಾವಾಣಿ ವಾರ್ತೆ
Published 12 ಮೇ 2022, 4:46 IST
Last Updated 12 ಮೇ 2022, 4:46 IST
ಶಿವಮೊಗ್ಗ ರಾಜೇಂದ್ರ ನಗರದ ರೋಟರಿ ಶಾಲಾ ಆವರಣದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ಹಮ್ಮಿಕೊಂಡಿದ್ದ ಚಿಣ್ಣರ ಚಿಲಿಪಿಲಿ ಮಕ್ಕಳ ಉಚಿತ ಬೇಸಿಗೆ ಶಿಬಿರದ ಸಮಾರೋಪಕ್ಕೆ ರೋಟರಿ ಜಿಲ್ಲಾ ಜಂಟಿ ಕಾರ್ಯದರ್ಶಿ ವೀರಣ್ಣ ಹುಗ್ಗಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಶಿವಮೊಗ್ಗ ರಾಜೇಂದ್ರ ನಗರದ ರೋಟರಿ ಶಾಲಾ ಆವರಣದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ಹಮ್ಮಿಕೊಂಡಿದ್ದ ಚಿಣ್ಣರ ಚಿಲಿಪಿಲಿ ಮಕ್ಕಳ ಉಚಿತ ಬೇಸಿಗೆ ಶಿಬಿರದ ಸಮಾರೋಪಕ್ಕೆ ರೋಟರಿ ಜಿಲ್ಲಾ ಜಂಟಿ ಕಾರ್ಯದರ್ಶಿ ವೀರಣ್ಣ ಹುಗ್ಗಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.   

ಶಿವಮೊಗ್ಗ: ಮಕ್ಕಳು ಮೊಬೈಲ್‌ ಹಾಗೂ ಜಂಕ್‌ಫುಡ್‌ಗಳಿಂದ ದೂರವಿದ್ದು, ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ. ರೇಖಾ ಸಲಹೆ ನೀಡಿದರು.

ರಾಜೇಂದ್ರ ನಗರದ ರೋಟರಿ ಶಾಲಾ ಆವರಣದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ಹಮ್ಮಿಕೊಂಡಿದ್ದ ಚಿಣ್ಣರ ಚಿಲಿಪಿಲಿ ಮಕ್ಕಳ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಕ್ಕಳು ಪಠ್ಯದ ಜತೆಗೆ ಪಠ್ಯೇತರದಲ್ಲೂ ಆಸಕ್ತಿ ಹೊಂದಬೇಕು. ಅಂಕ ಗಳಿಕೆಗಷ್ಟೇ ಗಮನ ನೀಡದೆ ಎಲ್ಲ ಕ್ಷೇತ್ರಗಳತ್ತ ದೃಷ್ಟಿ ಹರಿಸಬೇಕು. ಪೋಷಕರು ತಮ್ಮ ಕೆಲಸಗಳ ಒತ್ತಡದ ಮಧ್ಯೆಯೂ ಮಕ್ಕಳಿಗಾಗಿ ಒಂದಷ್ಟು ಸಮಯ ಮೀಸಲಿಡಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

ರೋಟರಿ ಜಿಲ್ಲಾ ಜಂಟಿ ಕಾರ್ಯದರ್ಶಿ ವೀರಣ್ಣ ಹುಗ್ಗಿ ಸಸಿಗೆ ನೀರೆರೆಯುವ ಮೂಲಕ ಸಮಾರೋಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಮೀಡಿಯಂ ಟಿ.ವಿ. ಚಾನಲ್ ಮುಖ್ಯಸ್ಥ ಹೊನ್ನಾಳಿ ಚಂದ್ರಶೇಖರ್ ಸಮಾರೋಪ ಭಾಷಣ ಮಾಡಿದರು. ಶಿಕ್ಷಣ ಇಲಾಖೆಯ ಅಧಿಕಾರಿ ಗಣಪತಿ, ಸ್ಥಳೀಯ ನಿವಾಸಿಗಳಾದ ಪ್ರೊ.ಪದ್ಮನಾಭ್, ವಿದ್ವಾನ್ ಕೇಶವಕುಮಾರ್, ಟಿ.ಪಿ. ನಾಗರಾಜ್, ಪರಮೇಶ್ವರ ಶಿಗ್ಗಾಂವ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಶಿವಯೋಗಿ ಉಪಸ್ಥಿತರಿದ್ದರು.

ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ನಿರ್ದೇಶಕ ಕೆ.ಸಿ. ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ಬೇಸಿಗೆ ಶಿಬಿರದಲ್ಲಿ ಕಲಿತ ಮಕ್ಕಳು ಯೋಗ, ಹಾಡು, ನಾಟಕ, ರೂಪಕ, ನೃತ್ಯ, ಚಿತ್ರಕಲೆ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.