ADVERTISEMENT

ಮಹಿಳೆಯರು ಆರ್ಥಿಕವಾಗಿ ಸದೃಢರಾಗಲಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 14:27 IST
Last Updated 12 ಸೆಪ್ಟೆಂಬರ್ 2024, 14:27 IST
ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯಲ್ಲಿ ಹೊಲಿಗೆ ಉಚಿತ ತರಬೇತಿ ಶಿಬಿರವನ್ನು ಗುರುವಾರ ಉದ್ಘಾಟಿಸಲಾಯಿತು
ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯಲ್ಲಿ ಹೊಲಿಗೆ ಉಚಿತ ತರಬೇತಿ ಶಿಬಿರವನ್ನು ಗುರುವಾರ ಉದ್ಘಾಟಿಸಲಾಯಿತು    

ತೀರ್ಥಹಳ್ಳಿ: ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರ ಪ್ರಯೋಜನ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಸವಾನಿ ಕೆನರಾ ಬ್ಯಾಂಕ್‌ ಪ್ರಬಂಧಕ ಸಂತ್ಯೇಂದ್ರ ಕಾಮತ್‌ ತಿಳಿಸಿದರು.

ಸೆಲ್ಕೊ ಸೋಲಾರ್‌ ಸಂಸ್ಥೆಯು ಬಸವಾನಿಯಲ್ಲಿ ಆಯೋಜಿಸಿದ್ದ ಹೊಲಿಗೆ ಉಚಿತ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬಹುದು. ಬ್ಯಾಂಕ್‌ ವತಿಯಿಂದ ಮಹಿಳೆಯರಿಗಾಗಿ ವಿಶೇಷ ಸಾಲ ಸೌಲಭ್ಯ ಒದಗಿಸಲಾತ್ತಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಸುಶ್ಮಿತಾ, ಹೊಲಿಗೆ ತರಬೇತುಗಾರ್ತಿ ಸುಪ್ರೀತಾ, ಸೆಲ್ಕೊ ಸಂಸ್ಥೆಯ ಜ್ಯೋತಿ, ಈಶ್ವರ್‌ ಎಂ., ಸಿಂಧು, ರವೀಶ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.