ADVERTISEMENT

ಎನ್‌ಐಆರ್‌ಎಫ್ 2025 ರ‍್ಯಾಂಕಿಂಗ್ ಪ್ರಕಟ: ಅಗ್ರ 100ರಲ್ಲಿ ಕುವೆಂಪು ವಿವಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 4:23 IST
Last Updated 6 ಸೆಪ್ಟೆಂಬರ್ 2025, 4:23 IST
ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕಚೇರಿ ನೋಟ
ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕಚೇರಿ ನೋಟ   

ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ 2025ನ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್‌ನಲ್ಲಿ (ಎನ್‌ಐಆರ್‌ಎಫ್) ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51 ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ ಸ್ಥಾನ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ 37ನೇ ಸ್ಥಾನ ಮತ್ತು ವಿಶ್ವೇಶ್ವರಾಯ ತಾಂತ್ರಿಕ ವಿವಿ 50ನೇ ಸ್ಥಾನ ಪಡೆದಿದೆ. 

ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ. 

ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಾರಂಭಿಸಿದೆ.

ವಿಶ್ವವಿದ್ಯಾಲಯದ ಅಧ್ಯಾಪಕರು ಗುಣಮಟ್ಟದ ಸಂಶೋಧನೆ ಪ್ರಕಟಣೆ ಮತ್ತು ವಿಸ್ತರಣಾ ಚಟುವಟಿಕೆ ಕೈಗೊಂಡು ಶೈಕ್ಷಣಿಕ ಬದ್ಧತೆ ಪ್ರದರ್ಶಿಸಿದ್ದಾರೆ. ಮುಂಬರುವ ದಿನಗಳಲ್ಲಿ ರ‍್ಯಾಂಕಿಂಗ್ ಉತ್ತಮಪಡಿಸಲು ಸುಧಾರಣೆ ತರಲಾಗುವುದು.
ಪ್ರೊ. ಶರತ್ ಅನಂತಮೂರ್ತಿ ಕುವೆಂಪು ವಿ.ವಿ ಕುಲಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.