ADVERTISEMENT

ಮೆಗ್ಗಾನ್‌ನಲ್ಲಿ ಸಿಗುತ್ತಿಲ್ಲ ಸಮರ್ಪಕ ಚಿಕಿತ್ಸೆ; ಆರೋಪ

ಕದಂಬ ಕನ್ನಡ ವೇದಿಕೆಯಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 5:25 IST
Last Updated 4 ಆಗಸ್ಟ್ 2022, 5:25 IST
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕದಂಬ ಕನ್ನಡ ವೇದಿಕೆಯ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕದಂಬ ಕನ್ನಡ ವೇದಿಕೆಯ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಇಲ್ಲಿನ ಮೆಗ್ಗಾನ್ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕದಂಬ ಕನ್ನಡ ವೇದಿಕೆ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮೆಗ್ಗಾನ್ ಬಡವರಿಗೆ ನೆರವಾಗುವ ಆಸ್ಪತ್ರೆ. ಇಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿಲ್ಲ. ರೋಗಿಗಳ ಜೊತೆ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ತೋರಿ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವವರು ಇದ್ದಾರೆ. ತರಬೇತಿ ಹಂತದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳು ಇದ್ದಾರೆ. ಹೌಸ್ ಕೀಪಿಂಗ್ ವಿಭಾಗದಲ್ಲೂ ಗುತ್ತಿಗೆ ಕೆಲಸಗಾರರಿದ್ದಾರೆ. ಅವರಿಗೆ ಯಾವುದೇ ಮುಖ್ಯ ಜವಾಬ್ದಾರಿ ಇಲ್ಲ. ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ ಎಂದು ದೂರಿದರು.

ADVERTISEMENT

ಆಸ್ಪತ್ರೆಯಲ್ಲಿ ಮೂಲಸೌಲಭ್ಯ ಇಲ್ಲ. ಸಾರ್ವಜನಿಕರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಭಯ ಪಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಖುದ್ದಾಗಿ ಪರಿಶೀಲನೆ ನಡೆಸಬೇಕು. ಅಸಮರ್ಪಕವಾಗಿರುವ ವ್ಯವಸ್ಥೆ ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕದಂಬ ಕನ್ನಡ ವೇದಿಕೆಯ ರಾಜ್ಯಾಧ್ಯಕ್ಷ ವಿಶ್ವನಾಥಗೌಡ, ನವೀನ್, ಲಕ್ಷ್ಮೀಶ, ಸತೀಶ್, ಸಂತೋಷ್, ಶಿವಣ್ಣ, ಮಂಜುನಾಯ್ಕ, ಗಂಗಾಧರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.