ADVERTISEMENT

ವಲಸೆ ಬಂದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ಇಲ್ಲ: ಕೆ.ಎಸ್.ಈಶ್ವರಪ್ಪ ಸುಳಿವು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 12:14 IST
Last Updated 2 ಆಗಸ್ಟ್ 2021, 12:14 IST
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಎರಡು ದಿನಗಳಲ್ಲಿ ಸಚಿವ ಸಂಪುಟ ರಚನೆಯಾಗಲಿದೆ. ಸಂಪುಟದಲ್ಲಿ ಯಾರು ಇರುತ್ತಾರೆ. ಇರುವುದಿಲ್ಲ ಎನ್ನುವುದು ಭಗವಂತ ಹಾಗೂ ಹೈಕಮಾಂಡ್‌ಗೆ ಗೊತ್ತಿದೆ. ಬಿಜೆಪಿಗೆ ವಲಸೆ ಬಂದು ಸರ್ಕಾರ ರಚನೆಗೆ ಕಾರಣರಾದ ಕೆಲವು ಶಾಸಕರಿಗೆ ಈ ಬಾರಿ ಅವಕಾಶ ಸಿಗದೆ ಇರಬಹುದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಅವರು ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಸಂಪುಟದಲ್ಲಿ ಯುವಕರು ಹಾಗೂ ಹಳಬರಿಗೆ ಸಮಾನ ಅವಕಾಶ ಸಿಗುವ ಸಾಧ್ಯತೆ ಇದೆ. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪಕ್ಷದ ವರಿಷ್ಠರು ಕೃಷ್ಣನ ತಂತ್ರಗಾರಿಕೆ ಮಾಡುತ್ತಿದ್ದಾರೆ. ಎರಡು ವರ್ಷಗಳ ನಂತರ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟಬಹುಮತ ದೊರಕಿಸುವ ಗುರಿ ಇದೆ. ಯಾವುದೇ ಲಾಭಿ, ಒತ್ತಡಕ್ಕೆ ಮಣೆ ಹಾಕುವುದಿಲ್ಲ ಎಂದರು.

ಬೊಮ್ಮಾಯಿ ಸರ್ಕಾರದ ಭವಿಷ್ಯ ಕುರಿತು ಸ್ವಾಮೀಜಿಯೊಬ್ಬರ ಭವಿಷ್ಯವಾಣಿ ಸತ್ಯ ಆಗಬಹುದು. ಸುಳ್ಳೂ ಆಗಬಹುದು. ಮುಖ್ಯಮಂತ್ರಿ ಯಡಿಯೂರಪ್ಪ ಆಶೀರ್ವಾದ ಪಡೆದಂತೆ ದೇವೇಗೌಡರ ಮನೆಗೂ ಭೇಟಿ ನೀಡಿದ್ದಾರೆ. ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ ಎಂದು ಸಮರ್ಥಿಸಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.