ADVERTISEMENT

ನವುಲೆ ಕೆರೆ ಒತ್ತುವರಿ: ಅಧಿಕಾರಿಗಳಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2019, 14:02 IST
Last Updated 26 ಏಪ್ರಿಲ್ 2019, 14:02 IST

ಶಿವಮೊಗ್ಗ: ನವುಲೆ ಕೆರೆ ಜಾಗದಲ್ಲಿ ರಾಜ್ಯ ಹೆದ್ದಾರಿ ನಿರ್ಮಾಣ ಮಾಡುತ್ತಿರುವ ಕುರಿತು ವಿವರ ನೀಡುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಧಿಕಾರಿ, ನಗರ ಪಾಲಿಕೆ ಆಯುಕ್ತರು, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಮುಖ್ಯಕಾರ್ಯದರ್ಶಿ, ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಪ್ರಧಾನ ಯೋಜನಾಧಿಕಾರಿ, ರಾಜ್ಯ ಕೆರೆ ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ನೋಟಿಸ್‌ ನೀಡಿದೆ.

ನವುಲೆ ಗ್ರಾಮದ ಸ.ನಂ.41ರ ಕೆರೆ ಜಾಗದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಪಡಿಸಲು ಕೆರೆಗೆ ಮಣ್ಣು ತುಂಬಲಾಗಿದೆ. ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯದೆ ಕಾಮಗಾರಿ ಕೈಗೊಳ್ಳಲಾಗಿದೆ. ಇದು ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ನಿಯಮ, ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರದ ನಿಯಮಕ್ಕೆ ವಿರುದ್ಧವಾಗಿದೆ ಎಂದು ಇಲ್ಲಿನ ನಾಗರಿಕ ಹಿತರಕ್ಷಣಾ ಸಮಿತಿ ಕಾನೂನು ಪ್ರಾಧಿಕಾರಕ್ಕೆ ದೂರು ಸಲ್ಲಿಸಿತ್ತು.

ದೂರು ಪರಿಶಳಿಸಿದ ಪ್ರಾಧಿಕಾರ ಕೆರೆ ಜಾಗದಲ್ಲಿ ರಸ್ತೆ ಕಾಮಗಾರಿ ಕಾನೂನು ಬಾಹಿರ. ಶಿಕ್ಷಾರ್ಹ ಅಪರಾಧ. ದೂರಿನ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಂಡು ತಕ್ಷಣ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಸದಸ್ಯ ಕಾರ್ಯದರ್ಶಿ ಹಂಚಾಟೆ ಸಂಜೀವ್ ಕುಮಾರ್ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.