ಭದ್ರಾವತಿ: ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳಿಂದ ರಾಜ್ಯದಲ್ಲಿ ಬಡಕುಟುಂಬಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಅವುಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮಂಗಳವಾರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ತಹಶೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮಂಗಳವಾರ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳು ನೂರಾರು ಹುಟ್ಟಿಕೊಂಡಿವೆ. ಈ ಕಂಪನಿಗಳಿಂದ ಸಾಲ ಪಡೆದ ಬಡ ಗ್ರಾಹಕರು ಸಂಪೂರ್ಣವಾಗಿ ಸಾಲ ಮರುಪಾವತಿ ಮಾಡಿದರೂ ಸಹ ಗ್ರಾಹಕರ ಖಾತೆಗಳಿಂದ ಗೊತ್ತಿಲ್ಲದಂತೆ ಹಣ ಕಡಿತಗೊಳ್ಳುತ್ತಿದೆ. ಇದರಿಂದಾಗಿ ಬಡಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ.
ಆದ್ದರಿಂದ ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡು ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆನ್‌ಲೈನ್‌ನಲ್ಲಿ ಸಾಲ ನೀಡುವ ಕಂಪನಿಗಳಿಂದ ಸಾಲ ಪಡೆಯದಂತೆ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್ ಪರುಸಪ್ಪ ಕುರುಬರ ಅವರ ಮೂಲಕ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.