ADVERTISEMENT

ಹೊಂಬುಜ ಪದ್ಮಾವತಿ ದೇವಿ ದರ್ಶನಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 4:29 IST
Last Updated 5 ಜುಲೈ 2021, 4:29 IST

ರಿಪ್ಪನ್‌ಪೇಟೆ:ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಜೈನರ ಪ್ರಸಿದ್ಧ ಯಾತ್ರಾ ಸ್ಥಳ ಹೊಂಬುಜ ಅತಿಶಯ ಮಹಾ ಕ್ಷೇತ್ರದಲ್ಲಿ ಜುಲೈ 5ರಿಂದ ಬಸದಿಗಳ ದರ್ಶನ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಗಿದೆ.

ಸರ್ಕಾರದ ಮಾರ್ಗಸೂಚಿಯಂತೆ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ ನಿಯಮ ಪಾಲಿಸಬೇಕು. ಪೂಜೆಗೆ ಮನೆ ಹಾಗೂ ಮಾರುಕಟ್ಟೆಗಳಿಂದ ತಂದ ವಸ್ತುಗಳನ್ನು ಸ್ವೀಕರಿಸುವುದಿಲ್ಲ. ದೇವರ ದರ್ಶನಕ್ಕೆ ಕೇವಲ ಒಬ್ಬರಿಗೆ ಗರಿಷ್ಠ 10 ನಿಮಿಷಗಳ ಸಮಯಾವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟ ಮತ್ತು ವಸತಿ ವ್ಯವಸ್ಥೆ ಇದೆ ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT