ಸಾಗರ: ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಾಲ್ಲೂಕಿನ ಆಲಳ್ಳಿ– ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಆರಂಭ ವಿರೋಧಿಸಿ ಭಾನುವಾರ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.
‘ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದಲ್ಲಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆಯುವುದರಿಂದ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ’ ಎಂದು ಗ್ರಾಮಸ್ಥರು ದೂರಿದ್ದಾರೆ.
‘ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರವಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ’ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಪ್ರಮುಖರಾದ ಅಶೋಕ್ ಬರದವಳ್ಳಿ, ಎಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.