ADVERTISEMENT

21ಕ್ಕೆ ಸರ್ಕಾರಿ ನೌಕರರ ದಿನಾಚರಣೆ: 20 ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

21ಕ್ಕೆ ಸರ್ಕಾರಿ ನೌಕರರ ದಿನಾಚರಣೆ: ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2022, 5:37 IST
Last Updated 19 ಏಪ್ರಿಲ್ 2022, 5:37 IST
ಸಿ.ಎಸ್‌. ಷಡಾಕ್ಷರಿ
ಸಿ.ಎಸ್‌. ಷಡಾಕ್ಷರಿ   

ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಏ.21ರಂದು ನೌಕರರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಈ ಹಿಂದೆ ನಡೆಸಲಾಗುತ್ತಿದ್ದ ನಾಗರಿಕ ಸೇವಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ವೋತ್ತಮ ಸೇವಾ ಪ್ರಶಸ್ತಿ: ರಾಜ್ಯ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ನೌಕರರನ್ನು ಗುರುತಿಸಿ, ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಈ ಸಾಲಿನ 10 ಜನ ಹಾಗೂ ಕಳೆದ ಸಾಲಿನಲ್ಲಿನ 10 ಜನ ಪ್ರತಿಭಾವಂತ ನೌಕರರನ್ನು ಗುರುತಿಸಲಾಗಿದ್ದು, ಒಟ್ಟು 20 ಜನ ನೌಕರರಿಗೆಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ₹ 10 ಸಾವಿರ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ADVERTISEMENT

ಕಾರ್ಯಕ್ರಮದಲ್ಲಿ ನೌಕರರು ಎದುರಿಸುತ್ತಿರುವ ಸವಾಲು, ಒತ್ತಡಗಳು, ಅದರ ಪರಿಹಾರೋಪಾಯಗಳು, ಸಾಮಾಜಿಕ ಹಾಗೂ ಕೌಟುಂಬಿಕ ನಿರ್ವಹಣೆಗೆ ಮಾರ್ಗದರ್ಶನ ಕುರಿತು ಆಹ್ವಾನಿತ ತಜ್ಞರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ನೌಕರರ ಸಂಘದ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಕಾರ್ಯದರ್ಶಿ ಕೃಷ್ಣಮೂರ್ತಿ, ಅರುಣ್, ದಿನೇಶ್, ಲಕ್ಷ್ಮಣ್, ಸತೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.