ಶಿಕಾರಿಪುರ: ಪಟ್ಟಣದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಗುರುವಾರ ಬಾಳೆಹೊನ್ನೂರು ರಂಭಾಪುರಿ ಪೀಠದ ಪೀಠಾಧ್ಯಕ್ಷ ವೀರಸೋಮೆಶ್ವರ ಶಿವಾಚಾರ್ಯ ಸ್ವಾಮೀಜಿ ಭೇಟಿ ನೀಡಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದ ಪಾದಪೂಜೆ ಸ್ವೀಕರಿಸಿದರು.
ತಾಲ್ಲೂಕಿನ ಕಡೇನಂದಿಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸ ಸೇರಿ ಪಟ್ಟಣದ ಹಲವು ಭಕ್ತರ ಮನೆಯಲ್ಲಿ ನಡೆದ ಪಾದಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನಂತರ ಕಡೇನಂದಿಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಚರ್ಚೆಗಳನ್ನು ನಡೆಸಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.