ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ
ಶಿವಮೊಗ್ಗ: ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತದೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲು: ‘ವಿಡಿಯೊ ಸಂಬಂಧ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವಿಡಿಯೊದ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ. ಅದು ಎಲ್ಲಿ ಹಾಗೂ ಯಾವಾಗ ಚಿತ್ರೀಕರಣಗೊಂಡಿದೆ. ನೈಜತೆ ದೃಢಪಟ್ಟರೆ ಘೋಷಣೆ ಕೂಗಿದವರು ಯಾರು ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದೇವೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.