ADVERTISEMENT

ನ್ಯಾಯಬೆಲೆ ಅಂಗಡಿ ಮಾಲೀಕರ ಬೇಡಿಕೆ ಈಡೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2025, 14:07 IST
Last Updated 5 ಮಾರ್ಚ್ 2025, 14:07 IST
ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಈಚೆಗೆ ಭದ್ರಾವತಿಗೆ ಭೇಟಿ ನೀಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌,ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು
ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಈಚೆಗೆ ಭದ್ರಾವತಿಗೆ ಭೇಟಿ ನೀಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌,ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು   

ಭದ್ರಾವತಿ: ನಗರ ವ್ಯಾಪ್ತಿಯಲ್ಲಿನ ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಪದಾಧಿಕಾರಿಗಳು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈಚೆಗೆ ಜಿಲ್ಲೆಗೆ ಆಗಮಿಸಿದ್ದ ಸಚಿವರಿಗೆ ಸಂಘದ ಸಂಘಟನಾ ಕಾರ್ಯದರ್ಶಿ, ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಲಿಂಗಯ್ಯನವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ನ್ಯಾಯಬೆಲೆ ಅಂಗಡಿಯವರಿಗೆ ಬರಬೇಕಾದ 2024ರ ಮಾರ್ಚ್ ತಿಂಗಳ ಕಮಿಷನ್ ಬಾಕಿ ಇದ್ದು, ತಕ್ಷಣ ನೀಡಬೇಕು. ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೀಡುತ್ತಿರುವ ಕಮಿಷನ್ ಅನ್ನು ಡಿ.ಬಿ.ಟಿ ಮುಖಾಂತರ ನೀಡಬೇಕು. ಬಯೋಮೆಟ್ರಿಕ್‌ ವ್ಯವಸ್ಥೆಯಿಂದಾಗಿ ಬೇರೆ ಊರುಗಳಿಗೆ ಕೆಲಸಕ್ಕೆ ಹೋಗಿರುವ ಕೂಲಿ ಕಾರ್ಮಿಕರು ಹಾಗೂ ವಯೋವೃದ್ಧರು ಪಡಿತರ ಪಡೆಯಲು ಸಾಧ್ಯವಾಗುತ್ತಿಲ್ಲ. ಆದಕಾರಣ ಒ.ಟಿ.ಪಿ ಪದ್ಧತಿ ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ನಗರ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಎಸ್.ಆರ್.ನಾಗರಾಜ್, ಎನ್.ರಾಜೇಂದ್ರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.