ADVERTISEMENT

ನುಗ್ಗುವ ಮಳೆ ನೀರು: ತಪ್ಪದ ಗೋಳು

ಪಾಲಿಕೆ, ಜಿಲ್ಲಾಡಳಿತದ ವಿರುದ್ಧ ಎಚ್‌.ಡಿ.ಕೆ. ಬ್ರಿಗೇಡ್ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 6:32 IST
Last Updated 7 ಆಗಸ್ಟ್ 2022, 6:32 IST

ಶಿವಮೊಗ್ಗ: ‘ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ವಾರ್ಡ್‌ನ ಸವಾಯಿ ಪಾಳ್ಯದ ಸುತ್ತಲಿನ ಜನ ಮಳೆ ಬಂದರೆ ಸಾಕು, ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಪಾಲಿಕೆಯಾಗಲಿ, ಜಿಲ್ಲಾಡಳಿತವಾಗಲಿ ಜನರ ಗೋಳು ಕೇಳುತ್ತಿಲ್ಲ' ಎಂದು ಎಚ್.ಡಿ.ಕೆ. ಮಲ್ನಾಡ್ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಸಿಬ್ಗತ್ ವುಲ್ಲಾ ಆರೋಪಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಮೊಗ್ಗದಲ್ಲಿ ಚಿಕ್ಕ ಮಳೆಯಾದರೆ ಸಾಕು, 33ನೇ ವಾರ್ಡ್ ಮತ್ತು ಅದರಸುತ್ತಲಿನ ಪ್ರದೇಶ ಸಂಪೂರ್ಣ ಜಲಾವೃತವಾಗುತ್ತವೆ. ಮನೆಗಳಿಗೆ ನೀರು ನುಗ್ಗುತ್ತದೆ. ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗುತ್ತದೆ. ವೃದ್ಧರು, ಶಾಲಾ ಮಕ್ಕಳು, ಮಹಿಳೆಯರು, ರೋಗಿಗಳು ಪರದಾಡುತ್ತಾರೆ’ ಎಂದು ದೂರಿದರು.

ಜಿಲ್ಲಾಡಳಿತ ಕೂಡಲೇ ಮಧ್ಯ ಪ್ರವೇಶಿಸಬೇಕು. ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರವೂ ಇದಕ್ಕೆ ಕಾರಣ. ಈ ಪ್ರದೇಶಗಳಲ್ಲಿ ಇರುವ ರಾಜಕಾಲುವೆಗಳನ್ನು ದುರಸ್ತಿ ಮಾಡಬೇಕು. ಚರಂಡಿಗಳನ್ನು ಸರಿಪಡಿಸಬೇಕು. ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತ್ವರಿತ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದ ನಾಗರಿಕರು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಬ್ರಿಗೇಡ್ ಪದಾಧಿಕಾರಿಗಳಾದ ಅನಿಲ್ ಕುಮಾರ್, ಪರಮೇಶ್ವರ್, ನಾದೀಮ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.