ADVERTISEMENT

ಪೋಕ್ಸೊ ಪ್ರಕರಣ: ಆರೋಪಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 4:24 IST
Last Updated 16 ಸೆಪ್ಟೆಂಬರ್ 2022, 4:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿಕಾರಿಪುರ: ಪೋಕ್ಸೊ ಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ತಾಲ್ಲೂಕಿನ ಯುವಕನೊಬ್ಬ
ಮರಕ್ಕೆ ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಯುವಕನ ವಿರುದ್ಧ 2019ರಲ್ಲಿ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದರಿಂದ ಪೊಲೀಸರು ಬಂಧಿಸಿದ್ದರು. ‘ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳಲು ದೂರುದಾರ ಬಾಲಕಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು’ ಎಂದು ಸಾವಿಗೆ ಮುನ್ನ ಯುವಕ ಪತ್ರ ಬರೆದಿದ್ದಾನೆ.

‘ಬಡವನಾದ ನನ್ನಿಂದ ಹಣ ನೀಡಲು ಸಾಧ್ಯವಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನಮ್ಮ ಪುತ್ರ ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಈ ಸಂಬಂಧ ಬಾಲಕಿಯ ತಂದೆ, ತಾಯಿ ಹಾಗೂ ಸಂಬಂಧಿಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮೃತ ಯುವಕನ ತಂದೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.