ಮದ್ಯ
(ಸಾಂಕೇತಿಕ ಚಿತ್ರ)
ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ರಿಪ್ಪನ್‌ಪೇಟೆ, ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್.ಪಿ ನೇತೃತ್ವದ ತಂಡ ಈ ದಾಳಿ ನಡೆಸಿದೆ.
ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವುಣೆ ಗ್ರಾಮದ ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಕುಮಾರ್ ಎಂಬುವರು ಬಂಧಿಸಿದ್ದು, ಮದ್ಯ ವಶಪಡಿಸಿಕೊಳ್ಳಲಾಗಿದೆ.
ಪಟ್ಟಣದ ಸಾಗರ ರಸ್ತೆಯ ಪುನೀತ್ ರಾಜ್‍ಕುಮಾರ್ ವೃತ್ತದ ಬಳಿ ಹೊಟೇಲ್‌ನಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ರಾಜೇಶ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಕೆಂಚನಾಲ ಗ್ರಾಮದ ನಾಗರಾಜ್ ಎಂಬುವರನ್ನು ಮದ್ಯ ಸಹಿತ ವಶಕ್ಕೆ ಪಡೆದಿದ್ದಾರೆ.
ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ – ಕೋಟೆಕೆರೆ ಗ್ರಾಮದ ಕಿರಾಣಿ ಅಂಗಡಿಯ ಮಾಲೀಕ ವಿನಾಯಕ ಎಂಬುವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ್, ಸಂತೋಷ್ ಕೊರವರ, ರಾಮಚಂದ್ರ ಮತ್ತು ನಾಗೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.