ಸಾಗರ: ಕಾನೂನಿನ ನಿಯಮಗಳನ್ನು ಪಾಲಿಸಿ ಅವುಗಳ ಚೌಕಟ್ಟಿನೊಳಗೆ ಹಬ್ಬಗಳನ್ನು ಆಚರಿಸುವ ಯಾರಿಗೇ ಆದರೂ ಪೊಲೀಸ್ ಇಲಾಖೆಯ ಬೆಂಬಲ ಸದಾ ಇರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದರು.
ಗೌರಿ– ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಇಲ್ಲಿನ ಶಾರದಾಂಬಾ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಮಂಗಳವಾರ ಏರ್ಪಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
ಹಬ್ಬದ ಆಚರಣೆಯಲ್ಲಿ ಪ್ರತಿಯೊಬ್ಬರೂ ಸಂಭ್ರಮದಿಂದಲೇ ಪಾಲ್ಗೊಳ್ಳಬೇಕು. ಇದೇ ಹೊತ್ತಿಗೆ ಶಾಂತಿ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳುವತ್ತ ಗಮನ ನೀಡಬೇಕು. ಸಾರ್ವಜನಿಕವಾಗಿ ಹಬ್ಬಗಳನ್ನು ಆಚರಿಸುವ ಸಂದರ್ಭದಲ್ಲಿ ಯಾವುದೇ ವಿವಾದಕ್ಕೆ ಅವಕಾಶವಿರಬಾರದು ಎಂದು ಕಿವಿಮಾತು ಹೇಳಿದರು.
‘ಹಬ್ಬಗಳ ಆಚರಣೆ ಸಂದರ್ಭದಲ್ಲಿ ಗಣಪತಿ ಪೆಂಡಾಲ್‌ನಲ್ಲಿ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಸಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗುವುದು. ಪೊಲೀಸ್ ಇಲಾಖೆ ಜೊತೆ ಸಹಕರಿಸುವ ಮೂಲಕ ಹಬ್ಬದ ಆಚರಣೆಯನ್ನು ನಡೆಸಬೇಕು’ ಎಂದು ಮನವಿ ಮಾಡಿದರು.
ಉಪ ವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ, ಎಎಸ್‌ಪಿ ಬೆನಕ ಪ್ರಸಾದ್, ಸರ್ಕಲ್ ಇನ್‌ಸ್ಪೆಕ್ಟರ್ ಪುಲ್ಲಯ್ಯ ರಾಥೋಡ್, ಮಹಾಬಲೇಶ್ವರ್ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.