ADVERTISEMENT

ಸಾಗರ: ಏಪ್ರಿಲ್ 1ರವರೆಗೆ ಕೋಳಿ ಮಾಂಸದ ಅಂಗಡಿ ಬಂದ್

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 10:59 IST
Last Updated 18 ಮಾರ್ಚ್ 2020, 10:59 IST
ಕೋಳಿ ಮಾಂಸದ ಅಂಗಡಿಗಳನ್ನು ಬಂದ್ ಮಾಡಿದ್ದರೂ ಕೆಲವರು ಕೋಳಿ ಮಾರಾಟ ಮಾಡುತ್ತಿದ್ದು, ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾಗರದಲ್ಲಿ ತಾಲ್ಲೂಕು ಕೋಳಿ ಮಾಂಸ ಮಾರಾಟಗಾರರ ಸಂಘದ ಪ್ರಮುಖರು ಮಂಗಳವಾರ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೋಳಿ ಮಾಂಸದ ಅಂಗಡಿಗಳನ್ನು ಬಂದ್ ಮಾಡಿದ್ದರೂ ಕೆಲವರು ಕೋಳಿ ಮಾರಾಟ ಮಾಡುತ್ತಿದ್ದು, ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾಗರದಲ್ಲಿ ತಾಲ್ಲೂಕು ಕೋಳಿ ಮಾಂಸ ಮಾರಾಟಗಾರರ ಸಂಘದ ಪ್ರಮುಖರು ಮಂಗಳವಾರ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.   

ಸಾಗರ: ಹಕ್ಕಿ ಜ್ವರ ಹಾಗೂ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಏಪ್ರಿಲ್ 1ರವರೆಗೆ ನಗರದಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಲು ತಾಲ್ಲೂಕು ಕೋಳಿ ಮಾಂಸ ಮಾರಾಟಗಾರರ ಸಂಘ ನಿರ್ಧರಿಸಿದೆ.

ಆದಾಗ್ಯೂ ಕೆಲವರು ಕದ್ದುಮುಚ್ಚಿ ಕೋಳಿ ಮಾಂಸ ಮಾರಾಟ ಮಾಡುತ್ತಿದ್ದು, ಅಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಸಂಘದ ಪ್ರಮುಖರು ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

‘ತಾಲ್ಲೂಕು ಆಡಳಿತ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸದೇ ಇದ್ದರೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಕೋಳಿ ಮಾಂಸ ಮಾರಾಟವನ್ನು ತಡೆದಿದ್ದೇವೆ’ ಎಂದು ಮನವಿಯಲ್ಲಿ ಹೇಳಲಾಗಿದೆ.

ADVERTISEMENT

ಇಂತಹ ಸನ್ನಿವೇಶದಲ್ಲಿ ಕೋಳಿ ಮಾಂಸ ಮಾರಾಟ ಮಾಡುವುದು ಸೂಕ್ತವಲ್ಲ ಎಂದು ಹೇಳಿದರೂ ಕೆಲವರು ಸಂಘದ ಪ್ರಮುಖರ ಮಾತುಗಳನ್ನು ಕೇಳುತ್ತಿಲ್ಲ. ಅಂತಹವರ ಮೇಲೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.

ಸಂಘದ ಅಧ್ಯಕ್ಷ ಸೈಯದ್ ತಾಹಿರ್, ಬಾಷಾ ಸಾಬ್, ಇಬ್ರಾಹಿಂ, ಇರ್ಫಾನ್, ಶಫಿ ಅಹ್ಮದ್, ಯಾಸಿನ್, ಉಮರ್, ಅಕ್ಮಲ್, ಮಹ್ಮದ್ ರಫೀಕ್, ಯೂಸೂಫ್, ಅಬ್ದುಲ್ ಖಾದರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.