ಶಿವಮೊಗ್ಗ: ಇಲ್ಲಿನ ಕರ್ನಾಟಕ ಸಂಘದಿಂದ ಜೀವಮಾನ ಸಾಧನೆಗಾಗಿ ನೀಡುವ ಡಾ.ಕೆ.ಶಿವರಾಮ ಕಾರಂತ ವಿಜ್ಞಾನ ಸಾಹಿತ್ಯ ಪ್ರಶಸ್ತಿಗೆ ಮಾನಸಿಕ ಆರೋಗ್ಯ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಹಾಗೂ ಡಾ.ಶಂಬಾ ಜೋಶಿ ಸಂಶೋಧನಾ ಪ್ರಶಸ್ತಿಗೆ ಸಾಹಿತಿ, ಸಂಶೋಧಕಿ ಮೈಸೂರಿನ ಡಾ.ಟಿ.ಎನ್.ನಾಗರತ್ನಾ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಮೊತ್ತ ₹25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಜೂನ್ 15ರಂದು ಸಂಜೆ 5.30ಕ್ಕೆ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.