ADVERTISEMENT

ಶಿವಶರಣರ ಜನ್ಮಸ್ಥಳದ ಅಭಿವೃದ್ಧಿಗೆ ಆದ್ಯತೆ

ಸಂಸದ ಬಿ.ವೈ. ರಾಘವೇಂದ್ರ ಭರವಸೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 4:15 IST
Last Updated 25 ಅಕ್ಟೋಬರ್ 2021, 4:15 IST
ಶಿಕಾರಿಪುರ ತಾಲ್ಲೂಕಿನ ದಿಂಡದಹಳ್ಳಿ ಮಠದಲ್ಲಿ ಈಚೆಗೆ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.
ಶಿಕಾರಿಪುರ ತಾಲ್ಲೂಕಿನ ದಿಂಡದಹಳ್ಳಿ ಮಠದಲ್ಲಿ ಈಚೆಗೆ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.   

ದಿಂಡದಹಳ್ಳಿ (ಶಿಕಾರಿಪುರ): ‘ಅಕ್ಕಮಹಾದೇವಿ, ಅಲ್ಲಮ ಪ್ರಭು ಸೇರಿ ಹಲವು ಶಿವಶರಣರು ಜನ್ಮತಾಳಿದ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ತಾಲ್ಲೂಕಿನ ದಿಂಡದಹಳ್ಳಿ ಮಠದಲ್ಲಿ ಈಚೆಗೆ ನಡೆದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಕಲ್ಲು ಎಡವಿದರೂ ಶಾಸನ ದೊರೆಯುತ್ತದೆ. ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಸ್ಥಳದ ಅಭಿವೃದ್ಧಿಗೆ ಅದ್ಯತೆ ನೀಡಲಾಗಿದೆ. ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆ ಅನುಷ್ಠಾನ ಮಾಡಲಾಗಿದೆ. ದಿಂಡದಹಳ್ಳಿ ಮಠ ಉತ್ತಮ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿದೆ. ಯುವ ಪೀಳಿಗೆ ಈ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ದಿಂಡದಹಳ್ಳಿ ಮಠದ ಪಶುಪತಿ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಜ್ಜಯಿನಿ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಸಾಲೂರು ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ತೊಗರ್ಸಿ ಮಳೆ ಹಿರೇಮಠದ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಬಿಳಿಕಿ ಮಠದ ರಾಚೂಟಿ ಶಿವಾಚಾರ್ಯ ಸ್ವಾಮೀಜಿ, ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.