ADVERTISEMENT

ಸೇವೆ ಕಾಯಂಗೆ ಅತಿಥಿ ಉಪನ್ಯಾಸಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 12:10 IST
Last Updated 25 ಜನವರಿ 2020, 12:10 IST

ಶಿವಮೊಗ್ಗ:ಸರ್ಕಾರಿಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದುಸರ್ಕಾರಿಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಒತ್ತಾಯಿಸಿದೆ.

ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಪ್ರತಿತಾಸಿಗೆ ₨1500ರಂತೆ ತಿಂಗಳಿಗೆ ಕನಿಷ್ಠ ₨ 50 ಸಾವಿರ ಗೌರವ ಧನ ನೀಡಲು ಯುಜಿಸಿ 2019ರ ಜನವರಿ 28ರಂದು ಶಿಫಾರಸುಮಾಡಿದೆ. ಈ ಆದೇಶವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಜಾರಿಗೆ ಬಂದಿದೆ. ರಾಜ್ಯದಲ್ಲಿ ಅತ್ಯಂತ ಕಡಿಮೆ ಗೌರವಧನ ನೀಡಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಡಾ.ಎಚ್.ಸೋಮಶೇಖರ್ ಶಿವಮೊಗ್ಗಿಶನಿವಾರಪತ್ರಿಕಾಗೋಷ್ಠಿಯಲ್ಲಿದೂರಿದರು.

ಅತಿಥಿ ಉಪನ್ಯಾಸಕರ ಸತತ ಹೋರಾಟದ ಫಲವಾಗಿ ಪ್ರಸಕ್ತ ಸಾಲಿನಲ್ಲಿ ₨ 5 ಸಾವಿರ ಹೆಚ್ಚಿಸಲು ಕಾಲೇಜು ಶಿಕ್ಷಣ ಇಲಾಖೆ ಶಿಫಾರಸು ಮಾಡಿದೆ. ಹಣಕಾಸು ಇಲಾಖೆ ಅನುಮತಿ ನೀಡಿಲ್ಲ. ಜೆಒಸಿ ಮಾದರಿಯಲ್ಲಿ ಸೇವಾ ವಿಲೀನಕ್ಕೆ ಕ್ರಮ ಕೈಗೊಳ್ಳಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ವರದಿ ನೀಡಿದ್ದರೂ, ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.

ADVERTISEMENT

ಉನ್ನತ ಶಿಕ್ಷಣ ಸಚಿವರು ಹಲವು ವರ್ಷಗಳಿಂದ ನಿಯಮಾನುಸಾರ ಆಯ್ಕೆಗೊಂಡು ಮಂಜೂರಾಗಿರುವ ಹುದ್ದೆಗೆ ಎದುರಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಬೇಕು. ನ್ಯಾಯದ ಹಕ್ಕಿಗಾಗಿ ರಾಜ್ಯಮಟ್ಟದ ಹೋರಾಟ ನಡೆಸಲು ಚಿಂತನೆ ನಡೆಸಲಾಗಿದೆಎಂದರು.

ಪತ್ರಿಕಾಗೋಷ್ಠಿಯಲ್ಲಿ ಸರ್ವಜ್ಞಮೂರ್ತಿ,ರಾಜೇಶ್‌ಕುಮಾರ್, ವಿ.ಧನಂಜಯಪ್ಪಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.