ADVERTISEMENT

ಇಂದಿನಿಂದ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 10:49 IST
Last Updated 25 ಸೆಪ್ಟೆಂಬರ್ 2019, 10:49 IST

ಶಿವಮೊಗ್ಗ: ನೆಹರೂ ಕ್ರೀಡಾಂಗಣದಲ್ಲಿ ಸೆ.26ರಿಂದ 28ರವರೆಗೆ ಕುವೆಂಪು ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ಆಯೋಜಿಸಲಾಗಿದೆ.

ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಡಿವಿಎಸ್ ಸಂಸ್ಥೆ ಅಧ್ಯಕ್ಷ ಕೆ.ಬಸಪ್ಪಗೌಡ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು 2017ರಲ್ಲಿ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಆಯೋಜಿಸಿತ್ತು. ಈ ಬಾರಿ ಅಥ್ಲೆಟಿಕ್ಸ್ ಕ್ರೀಡಾಕೂಟ ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ 48 ಕಾಲೇಜುಗಳ 750 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. 430 ವಿದ್ಯಾರ್ಥಿಗಳು, 320 ವಿದ್ಯಾರ್ಥಿನಿಯರು ಇದ್ದಾರೆ. 150 ಅಧಿಕಾರಿ ವರ್ಗ, ತಾಂತ್ರಿಕ ವರ್ಗ, 70 ಸ್ವಯಂ ಸೇವಕರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ADVERTISEMENT

ಸೆ. 26ರ ನಾಳೆ ಬೆಳಿಗ್ಗೆ 9ಕ್ಕೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಕ್ರೀಡಾಕೂಟ ಉದ್ಘಾಟಿಸುವರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್, ಡಿವಿಎಸ್ ಸಮಿತಿ ಕಾರ್ಯದರ್ಶಿ ಎಸ್.ಜೆ.ರಾಜಶೇಖರ್, ಡಾ.ಎನ್.ಡಿ.ವಿರೂಪಾಕ್ಷ, ಅಂತರಾಷ್ಟ್ರೀಯ ಕ್ರೀಡಾಕೂಟ ಸತ್ಯನಾರಾಯಣ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

28ರ ಮಧ್ಯಾಹ್ನ 3.30ಕ್ಕೆ ನಡೆಯುವ ಸಮರೋಪದಲ್ಲಿ ಕುಲಸಚಿವ ಡಾ.ಎಸ್.ಎಸ್.ಪಾಟೀಲ್ ಸಮಾರೋಪ ನುಡಿಗಳಾಡುವರು. ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಕೆ.ಪ್ರಸಾದ್, ಡಿವಿಎಸ್ ಉಪಾಧ್ಯಕ್ಷ ಕೆ.ಎಸ್.ರುದ್ರಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಿವಿಎಸ್ ಖಜಾಂಚಿ ಬಿ.ಗೋಪಿನಾಥ್, ಪ್ರಾಂಶುಪಾಲ ಡಾ.ಎಚ್.ಟಿ.ಕೃಷ್ಣಮೂರ್ತಿ, ದೈಹಿಕ ಶಿಕ್ಷಕ ನಿರ್ದೇಶಕ ಕೆ.ಸಚಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.