ಶಿವಮೊಗ್ಗ: ಜಗದ್ಗುರು ಪಂಚಾಚಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯ 31ನೇ ವಾರ್ಷಿಕೋತ್ಸವದ ಅಂಗವಾಗಿ ವೀರಶೈವ ಲಿಂಗಾಯತ ವಧು– ವರರ ಸಮಾವೇಶವನ್ನು ಸಹ್ಯಾದ್ರಿ ಕಾಲೇಜಿನ ಹಿಂಭಾಗದ ತರಬೇತಿ ಸಂಸ್ಥೆಯ ಆವರಣದಲ್ಲಿ ಜೂನ್ 3ರಂದು ಮಧ್ಯಾಹ್ನ 1ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಸಂಸ್ಥೆಯ ಸಂಸ್ಥಾಪಕ ವಿಘ್ನೇಶ್ವರಯ್ಯ ಸೋಲಾಪುರ ತಿಳಿಸಿದರು.
ಬಾಳೆಹೊನ್ನೂರು ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಿಗ್ಗೆ 8ರಿಂದ ನಿಧಿಗೆಯಲ್ಲಿರುವ ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯದ ವೈದ್ಯರಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಳಲಿ ಹಾಗೂ ಕಡೇನಂದಿಹಳ್ಳಿ ಶ್ರೀಗಳು ನೇತೃತ್ವ ವಹಿಸಲಿದ್ದು, ಬಿದಿರೆಯ ವೀರಸಂಗಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬಸವ ಕೇಂದ್ರದ ಅಧ್ಯಕ್ಷ ಜಿ.ಬೆನಕಪ್ಪ, ವಕೀಲ ಎಚ್.ಎಂ.ಪೂರ್ಣಿಮಾ, ಸಮಾಜದ ಮುಖಂಡ ಉಮೇಶ್ ಹಿರೇಮಠ್, ಜಿಲ್ಲಾ ಜಂಗಮ ಮಹಿಳಾ ಸಮಾಜದ ಅಧ್ಯಕ್ಷ ಎಚ್.ಎಂ.ಪ್ರೇಮಾ, ಸೃಷ್ಟಿ ಮಹಿಳಾ ಸಮಾಜದ ಅಧ್ಯಕ್ಷೆ ರತ್ನಾ ಮಂಜುನಾಥ್ ಭಾಗವಹಿಸಲಿದ್ದಾರೆ ಎಂದರು.
ಸಂಜೆ 5.30ರಿಂದ ಎಸ್‌ಜೆಪಿಐಟಿಐ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಂಸ್ಥೆಯ ಪ್ರಾಚಾರ್ಯ ಡಿ.ಎನ್. ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಪ್ರಮುಖರಾದ ನಾಗರಾಜ ಬೆಳಕೇರಿಮಠ, ಡಿ.ಎನ್. ಪರಮೇಶ್ವರಪ್ಪ, ಜಿ.ಎಂ. ಮಲ್ಲಿಕಾರ್ಜುನ ಸ್ವಾಮಿ, ವೀರಸಂಗ್ಯ ಬಿದರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.