ADVERTISEMENT

ಭದ್ರಾವತಿ ತಹಶೀಲ್ದಾರ್ ಅಮಾನತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 4:21 IST
Last Updated 16 ಸೆಪ್ಟೆಂಬರ್ 2020, 4:21 IST

ಶಿವಮೊಗ್ಗ: ‘ಭದ್ರಾವತಿ ತಾಲ್ಲೂಕು ಕಚೇರಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ತಹಶೀಲ್ದಾರ್‌ ಎಚ್‌.ಸಿ. ಶಿವಕುಮಾರ್‌ ಅವರು ಲೈಂಗಿಕ ಕಿರುಕುಳ ನೀಡಿದ್ದು, ಅವರನ್ನು ಕೂಡಲೇ ಅಮಾನತುಗೊಳಿಸಬೇಕು’ ಎಂದುದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಜಿಲ್ಲಾ ಸಂಚಾಲಕ ಹಾಲೇಶಪ್ಪ ಒತ್ತಾಯಿಸಿದರು.

ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆ ಭದ್ರಾವತಿಯ ಹಳೇನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಷಯ ತಿಳಿದ ಜಿಲ್ಲಾಧಿಕಾರಿ ಅವರು ಶಿವಕುಮಾರ್‌ ಅವರನ್ನು ತಹಶೀಲ್ದಾರ್ ಸೇವೆಯಿಂದ ಬಿಡುಗಡೆಗೊಳಿಸಿದ್ದಾರೆ. ಇಷ್ಟು ಸಾಲದು ಅವರನ್ನು ಬಂಧಿಸಿ, ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಎಸ್. ಮಣಿಶೇಖರ್, ಕುಬೇಂದ್ರಪ್ಪ, ಬದ್ರಿನಾರಾಯಣ್, ಮಂಜುನಾಥ್, ಮೈಲಾರಪ್ಪ, ಯೋಗೇಶ್ವರಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.