ಶಿವಮೊಗ್ಗ: ಕೊರೊನಾ ಕಾರಣದಿಂದ ಜನರು ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಕಾರಣಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕೊರೊನಾ ಕಾರಣಕ್ಕೆ ಲಾಕ್‍ಡೌನ್ ಆಗಿದ್ದು ಇತಿಹಾಸ. ಲಾಕ್‍ಡೌನ್ ತೆರವಾಗಿದ್ದರೂ ಕೂಡ ಜನರು ಸಂಕಷ್ಟದಿಂದ ಪಾರಾಗಿಲ್ಲ. ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ. ದುಡಿಮೆ ಇಲ್ಲ. ಇಂತಹಸಮಯದಲ್ಲಿತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಅವರಿಗೆ ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲಾಶುಲ್ಕವನ್ನು ಮನ್ನಾ ಮಾಡಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುತ್ತಿರುವ ಪೋಷಕರು ಈಗ ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ, ಖಾಸಗಿ ಶಾಲೆಗಳಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ, ಅಂಕಪಟ್ಟಿನೀಡುತ್ತಿಲ್ಲ. ಇದರಿಂದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಿಂಸೆಯಾಗುತ್ತಿದೆ ಎಂದು ಆರೋಪಿಸಿದರು.
ಸಂಘಟನೆಯ ಮುಖಂಡರಾದ ರಿಯಾಜ್ ಅಹಮದ್, ಸಲೀಂ ಅಹಮ್ಮದ್, ನಾಗರಾಜ್, ಬಷೀರ್, ಶಫೀ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.