ADVERTISEMENT

ಇವಿಎಂ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2019, 15:18 IST
Last Updated 25 ಜನವರಿ 2019, 15:18 IST

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತಪತ್ರಗಳನ್ನೇ ಬಳಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜವಾದಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಇವಿಎಂ ಬಳಕೆ ಕುರಿತು ಹಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಆಧನಿಕ ತಂತ್ರಜ್ಞಾನ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯೂ ಇದೆ. ಇವಿಎಂ ಯಂತ್ರಗಳನ್ನೇ ಹ್ಯಾಕ್ ಮಾಡುವ ತಂತ್ರಜ್ಞಾನ ಬಂದಿದೆ. ಹಲವು ದೇಶಗಳಲ್ಲಿ ಈ ರೀತಿ ಹ್ಯಾಕ್ ಮಾಡಲಾಗಿದೆ. ಹಾಗಾಗಿ, ಮತಯಂತ್ರಗಳನ್ನೇ ಬಳಸಬೇಕು ಎಂದು ಒತ್ತಾಯಿಸಿದರು.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನುಮಾನ ಮೂಡಿಸಿದೆ ಎಂದರು.

ADVERTISEMENT

ಬಿಎಸ್‌ಪಿ ಮುಖಂಡರಾದ ಜಿ.ಮೋಹನ್ ಕುಮಾರ್, ಡಿ.ರವಿ, ರಾಚಪ್ಪ, ಲಕ್ಷ್ಮೀಪತಿ, ಶಿವರುದ್ರಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.