ADVERTISEMENT

ಮೆಸ್ಕಾಂ ಕಚೇರಿಗೆ ಹೊರಗುತ್ತಿಗೆ ನೌಕರರ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 14:34 IST
Last Updated 17 ಜೂನ್ 2019, 14:34 IST
ಶಿವಮೊಗ್ಗದಲ್ಲಿ ಹೊರಗುತ್ತಿಗೆ ನೌಕರರು ಸೋಮವಾರ ಮೆಸ್ಕಾಂ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಹೊರಗುತ್ತಿಗೆ ನೌಕರರು ಸೋಮವಾರ ಮೆಸ್ಕಾಂ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಹೊಳಲೂರಿನಲ್ಲಿ ವಿದ್ಯುತ್ ಮಾರ್ಗದ ದುರಸ್ತಿ ಮಾಡುತ್ತಿದ್ದ ಹೊರಗುತ್ತಿಗೆ ನೌಕರನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದಕ್ಕೆ ಎಂಜಿನಿಯರ್ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಹೊರಗುತ್ತಿಗೆ ನೌಕರರ ಸಂಘದ ಮುಖಂಡರು ಬಾಲರಾಜ ಅರಸು ರಸ್ತೆಯ ಮೆಸ್ಕಾಂ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗಾಯಗೊಂಡ ನಾಗೇಶ್ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊರಗುತ್ತಿಗೆ ಕಾರ್ಮಿಕರಿಗೆ ಭದ್ರತೆ ಇಲ್ಲ. ನಾಗೇಶ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಎಂಜಿನಿಯರ್‌ ಅಮಾನತು ಮಾಡಬೇಕು ಎಂದು ಸಂಘದ ಅಧ್ಯಕ್ಷ ರಾಜಶೇಖರನ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT