ADVERTISEMENT

ಕಳಪೆ ಚರಂಡಿ ದುರಸ್ತಿಗೆ ಎಸ್‌ಡಿಪಿಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 10:43 IST
Last Updated 2 ಜುಲೈ 2019, 10:43 IST
ಶಿವಮೊಗ್ಗದಲ್ಲಿ ಮಂಗಳವಾರ ಎಸ್‌ಡಿಪಿಐ ಕಾರ್ಯಕರ್ತರು ಚರಂಡಿ, ರಸ್ತೆ ಕಾಮಗಾರಿ ದುರಸ್ತಿಗೆ ಆಗ್ರಹಿಸಿ ಮೇಯರ್ ಲತಾ ಗಣೇಶ್ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗದಲ್ಲಿ ಮಂಗಳವಾರ ಎಸ್‌ಡಿಪಿಐ ಕಾರ್ಯಕರ್ತರು ಚರಂಡಿ, ರಸ್ತೆ ಕಾಮಗಾರಿ ದುರಸ್ತಿಗೆ ಆಗ್ರಹಿಸಿ ಮೇಯರ್ ಲತಾ ಗಣೇಶ್ ಅವರಿಗೆ ಮನವಿ ಸಲ್ಲಿಸಿದರು.   

ಶಿವಮೊಗ್ಗ: 32ನೇ ವಾರ್ಡ್‌ ವ್ಯಾಪ್ತಿಯಲ್ಲಿ ಒಡೆದು ಹೋಗಿರುವ, ಕಳಪೆ ಗುಣಮಟ್ಟದ ಚರಂಡಿಗಳನ್ನು ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಅಧ್ಯಕ್ಷ ಇಸಾಕ್ ಅಹಮದ್‌ ನೇತೃತ್ವದಲ್ಲಿ ಮಂಗಳವಾರ ನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

ಟಿಪ್ಪು ನಗರದಲ್ಲಿ ಬಹಳಷ್ಟು ಚರಂಡಿಗಳು ಹೊಡೆದು ಹೋಗಿವೆ. ಕೆಲವು ಕಳಪೆ ಕಾಮಗಾರಿ ಪರಿಣಾಮ ಅಲ್ಲಲ್ಲಿ ಕುಸಿದಿವೆ. ನೀರು ಹರಿಯದೇ ಮುಚ್ಚಿ ಹೋಗಿವೆ. ಹಿಂದಿನ ವರ್ಷದ ಮಳೆಗಾಲದಲ್ಲಿ ಮಳೆ ನೀರು, ಚರಂಡಿ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿತ್ತು. ಈ ಬಾರಿ ಮಳೆಗಾಲ ಆರಂಭಕ್ಕೂ ಮೊದಲೆ ಮನವಿ ನೀಡಿದ್ದರೂ ಗಮನಹರಿಸಿಲ್ಲ ಎಂದು ಆರೋಪಿಸಿದರು.

ಅಂಬೇಡ್ಕರ್ ನಗರ, ಟಿಪ್ಪುನಗರದ ಹಲವು ಭಾಗಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವವರ ನಿರ್ಲಕ್ಷ್ಯದ ಪರಿಣಾಮ ಸಮಸ್ಯೆ ಹೆಚ್ಚಾಗಿದೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಬೇಕು. ರಸ್ತೆಗಳು ಸಂಪೂರ್ಣ ಹಾಳಾಗಿವೆ. ವಾಹನ ಸಂಚಾರ ದಟ್ಟಣೆ ಪರಿಣಾಮ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT