ADVERTISEMENT

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಮೇ 2021, 2:53 IST
Last Updated 16 ಮೇ 2021, 2:53 IST
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು ಎಂದು ಒತ್ತಾಯಿಸಿ ಸೊರಬದಲ್ಲಿ ಚಿಂತಕ ರಾಜಪ್ಪ ಮಾಸ್ತರ್ ತಮ್ಮ ಮನೆ ಎದುರು ಪ್ರತಿಭಟನೆ ನಡೆಸಿದರು
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು ಎಂದು ಒತ್ತಾಯಿಸಿ ಸೊರಬದಲ್ಲಿ ಚಿಂತಕ ರಾಜಪ್ಪ ಮಾಸ್ತರ್ ತಮ್ಮ ಮನೆ ಎದುರು ಪ್ರತಿಭಟನೆ ನಡೆಸಿದರು   

ಸೊರಬ: ಕೊರಾನಾ ನಿಯಂತ್ರಿಸುವ ಜೊತೆಗೆ ಸರ್ಕಾರ ಜನರ ಜೀವ ಉಳಿಸುವ ನಿಟ್ಟಿನಲ್ಲಿ ಸಮರ್ಥ ಹೊಣೆಗಾರಿಕೆ ನಿರ್ವಹಿಸಬೇಕು.18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಎಂದು ಆಗ್ರಹಿಸಿ ಸಮಾಜ ಚಿಂತಕ ರಾಜಪ್ಪ ಮಾಸ್ತರ್ ತಮ್ಮ ಮನೆ ಎದುರು ಶನಿವಾರ ಕುಟುಂಬ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿದರು.

ಸಮಗ್ರ ಪಡಿತರ ಹಂಚಿಕೆ, ಕೆಲಸ ಕಳೆದುಕೊಂಡವರಿಗೆ ಪರಿಹಾರ, ಆಮ್ಲಜನಕ ಪೂರೈಕೆ, ಬೆಡ್ ನೀಡಬೇಕು.
ಕೊರಾನಾ ಎರಡನೇ ಅಲೆಗೆ ಜನರ ಬದುಕು ಅತಂತ್ರವಾಗಿದೆ. ಬಡವರು ಸೇರಿ ಮಧ್ಯಮ ವರ್ಗದ ಕುಟುಂಬಗಳಿಗೆ ಸಮಗ್ರವಾಗಿ ಪಡಿತರ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಕೋವಿಡ್‌ನಿಂದ ಕೆಲಸ ಕಳೆದುಕೊಂಡ ಕುಟುಂಬಗಳಿಗೆ ಕೂಡಲೇ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಕೋವಿಡ್ ಆಸ್ಪತ್ರೆ ಕೇಂದ್ರಗಳಲ್ಲಿ ಸಮರ್ಪಕವಾದ ಆಮ್ಲಜನಕ, ರೋಗಿಗಳಿಗೆ ಬೆಡ್ ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಜವಾಬ್ದಾರಿವುಳ್ಳ ಸರ್ಕಾರದ ಕರ್ತವ್ಯ ಉತ್ತಮ ಆಡಳಿತ ನೀಡುವುದು ಹಾಗೂ ಜನರ ಜೀವ ರಕ್ಷಣೆ ಮಾಡುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕೊರಾನಾ ನಿಯಂತ್ರಿಸುವಲ್ಲಿ ದಿಟ್ಟ ಹೆಜ್ಜೆ ಇಡಬೇಕಿದೆ ಎಂದು ಆಗ್ರಹಿಸಿದರು.

ಅವಿನಾಶ್, ಶೇಖರಮ್ಮ ರಾಜಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.